ಮಾದಕ ವಸ್ತು ನಿಯಂತ್ರಣದ ತನಿಖಾ ಸ್ವರೂಪ ಬದಲಾಯಿಸಿಕೊಳ್ಳಿ: ರಾಜ್ಯಗಳಿಗೆ ಅಮಿತ್ ಶಾ ಕರೆ

Date:

Advertisements
  • ಬೆಂಗಳೂರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನ
  • ಮಾದಕವಸ್ತುಗಳ ಪ್ರಸರಣ ತಡೆ ಕಾನೂನಿಗೆ ಮತ್ತಷ್ಟು ಬಲ

ಈ ಹಿಂದೆ ಆಡಳಿತದಲ್ಲಿದ್ದ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ಈಗ ಕಾಲ ಬದಲಾಗಿದೆ. ದೇಶದಲ್ಲಿ ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಮಿತ್ ಶಾ ಹೇಳಿದರು.

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ, ನಿಯೋಜಿತ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಾದಕ ವಸ್ತುಗಳ ನಿಯಂತ್ರಣ ಇಲ್ಲಿಯವರೆಗೆ ಒಂದು ರೀತಿ ಸವಾಲಾಗಿತ್ತು. ಆದರೆ ಈಗ ಸುಧಾರಿತ ಕ್ರಮಗಳನ್ನು ಗೃಹ ಇಲಾಖೆ ತೆಗೆದುಕೊಳ್ಳುತ್ತಿದೆ. ಇದರ ಜೊತೆಗೆ ಮಾದಕ ವಸ್ತು ಮುಕ್ತ ಅಭಿಯಾನವನ್ನ ಕೇಂದ್ರ ಮಾಡುತ್ತಿದೆ. ಮಾದಕ ವಸ್ತು ಮುಕ್ತ ದೇಶವನ್ನಾಗಿಸುವ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ ಎಂದರು.

Advertisements

ನಶೆ ಮುಕ್ತ ಭಾರತಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ದೇಶದ ಭದ್ರತೆ ಸಲುವಾಗಿ ಎಲ್ಲ ಇಲಾಖೆಗಳು ಒಟ್ಟಾಗಿ ಶ್ರಮಿಸಬೇಕು. ದಕ್ಷಿಣ ರಾಜ್ಯಗಳು ಡ್ರಗ್ಸ್ ತನಿಖೆಯ ಸ್ವರೂಪ ಬದಲಿಸಿಕೊಳ್ಳಬೇಕು. ಡ್ರಗ್ಸ್ ಸರಬರಾಜು ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗೃಹ ಸಚಿವರು ಕರೆ ನೀಡಿದರು.

ಹಾಲಿ ಇರುವ ಎನ್ ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾನೂನನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ವಿಚಾರದಲ್ಲಿ ಸುಧಾರಿತ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ಅಭಿವೃದ್ಧಿ ಪರ ನೀತಿಯಿಂದ ಎಲ್ಲವೂ ಬದಲಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿ ಮತ್ತು ಐಜಿ ಪ್ರವೀಣ್ ಸೂದ್ ಹಾಗೂ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X