ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ: ಹೆಚ್‌ ಡಿ ಕುಮಾರಸ್ವಾಮಿ ಪತ್ರ

Date:

ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಅವರು ಭೂ ದಾಖಲೆಗಳ ಇಲಾಖೆಗೆ ಪತ್ರ ಬರೆದಿದ್ದಾರೆ.

- Advertisement -

ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಪತ್ರ ಬರೆದು, “ಬಿಡದಿಯ ಕೇತಗಾನಹಳ್ಳಿ ಸರ್ವೆ ನಂಬರ್ 7ರಲ್ಲಿ 5 ಎಕರೆ 20 ಗುಂಟೆ ಜಮೀನು ಖರೀದಿಸಿದ್ದೇನೆ. ಈ ಪೈಕಿ 1.25 ಎಕರೆ ಜಮೀನಿನಲ್ಲಿ ಮಾತ್ರ ಅನುಭವದಲ್ಲಿರುತ್ತೇನೆ. ಉಳಿದ ಜಮೀನನ್ನು ಗುರುತಿಸಿ ಹುಡುಕಿಕೊಡುವಂತೆ” ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪತ್ರದಲ್ಲಿ ಏನಿದೆ?

“ರಾಮನಗರ ತಾಲೂಕು ಬಿಡದಿ ಹೋಬಳಿಯ ಕೀತಿಗಾನಹಳ್ಳಿ ಗ್ರಾಮದ ಸರ್ವೇ ನಂ. 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿ ಆಗಿದ್ದರೆ ಸರ್ವೇ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ನಿರ್ದೇಶನ ನೀಡಿರುವುದು ಸರಿಯಷ್ಟೇ. ನ್ಯಾಯಾಲಯದ ಸೂಚನೆಯಂತೆ ತಮ್ಮ ಸಮೀಕ್ಷಾ ತಂಡ ದಿನಾಂಕ 18-02-2025ರ ಮಂಗಳವಾರ ಮೇಲ್ಕಂಡ ಎಲ್ಲಾ ಸರ್ವೇ ನಂ.ಗಳು ಸೇರಿದಂತೆ ನಾನು ಅನುಭವದಲ್ಲಿರುವ ಸರ್ವೇ ನಂ. 7-8ರಲ್ಲಿಯೂ ಸರ್ವೇ ನಡೆಸಲಾಗಿದೆ. ಸರ್ವೇ ನಂ.7-8ರಲ್ಲಿ ಮಾತ್ರ ನಾನು ಪಹಣಿ ದಾಖಲೆ ಹೊಂದಿದ್ದು, ಸರ್ವೇ ನಂ.7ರಲ್ಲಿ 5.20 ಎ/ಗುಂಟೆ ಜಮೀನನ್ನು ಕೇತಿಗಾನಹಳ್ಳಿ ಗ್ರಾಮದ ಕಂವೀರಯ್ಯ, ದೇವರಾಜು, ದೊಡ್ಡಯ್ಯ, ಸಾವಿತ್ರಮ್ಮ ಕೋಮ್ ಹನುಮೇಗೌಡ, ದೇವರಾಜು ಅವರಿಂದ ಖರೀದಿ ಮಾಡಿದ್ದು, ಆ ಪೈಕಿ ಕೇವಲ 1.15 ಎ/ಗುಂಟೆ ಜಮೀನಿನಲ್ಲಿ ಮಾತ್ರ ಅನುಭವದಲ್ಲಿರುತ್ತೇನೆ. ಉಳಿದ ಜಮೀನನ್ನು ತಾವುಗಳು ಹುಡುಕಿಕೊಡಬೇಕು” ಎಂದು ವಿನಂತಿ ಮಾಡಿದ್ದಾರೆ.

ಭೂಮಿ ತೆರವು ಕಾರ್ಯಾಚರಣೆಗೆ ಸಿದ್ಧತೆ

ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಕೇತಗಾನಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಬಂಧಿಕರು ಸೇರಿದಂತೆ ಇತರರು ಒತ್ತುವರಿ ಮಾಡಿರುವ 15 ಎಕರೆ ಸರ್ಕಾರಿ ಭೂಮಿ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.

ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಸೂಚನೆ ಅನ್ವಯ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಇಳಿದಿದೆ. ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್‌ಡಿಕೆ ತೋಟದ ಮನೆ ಮುಂದೆ ಐದು ಜೆಸಿಬಿ ವಾಹನಗಳು, ಎರಡು ಟ್ರ್ಯಾಕ್ಟರ್‌ಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ. ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕೋರ್ಟ್ ಆದೇಶ ಹಾಗೂ ಒತ್ತುವರಿ ಸರ್ವೆ ವರದಿಯೊಂದಿಗೆ ಕುಮಾರಸ್ವಾಮಿ ಅವರ ತೋಟದ ಮನೆ ಜಾಗಕ್ಕೆ ಬೆಳಿಗ್ಗೆ 11.45ರ ಸುಮಾರಿಗೆ ಬಂದಿದ್ದಾರೆ. ಉಪ ವಿಭಾಗಾಧಿಕಾರಿ ಬಿನೋಯ್ ಪಿ.ಕೆ, ತಹಶೀಲ್ದಾರ್ ತೇಜಸ್ವಿನಿ, ಸರ್ವೆ ಅಧಿಕಾರಿ ಹನುಮೇಗೌಡ, ಪೊಲೀಸರು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದಾರೆ.

ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....