ಕೇರಳ | ‘ಭಾರತ್ ಮಾತಾಕೀ ಜೈ’ ಘೋಷಣೆಗೆ ಸಹಕರಿಸದ ಸಭಿಕರು: ತಾಳ್ಮೆ ಕಳೆದುಕೊಂಡ ಕೇಂದ್ರ ಸಚಿವೆ!

Date:

ಕೇರಳದ ಕೋಝಿಕ್ಕೋಡ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ತಮ್ಮ ಭಾಷಣದ ಕೊನೆಯಲ್ಲಿ ಕೂಗಿದ್ದ ‘ಭಾರತ್ ಮಾತಾಕೀ ಜೈ’ ಘೋಷಣೆಗೆ ಸಭಿಕರು ಸಹಕರಿಸದ ಕಾರಣ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆದಿದೆ.

ಇಂದು(ಫೆ.3) ಕೇರಳದ ಕೋಝಿಕ್ಕೋಡ್‌ನಲ್ಲಿ ‘ಅವೇಕ್ ಯೂತ್ ಕಾನ್‌ಕ್ಲೇವ್ 2024’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ತಮ್ಮ ಮಾತಿನ ಕೊನೆಯಲ್ಲಿ ‘ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದರು. ಈ ವೇಳೆ ಎಲ್ಲ ಪ್ರೇಕ್ಷಕರ ಬದಲಿಗೆ ಕೆಲವರಷ್ಟೇ ಸಹಕಾರ ನೀಡಿದರು.

ಈ ವೇಳೆ ಸಭೆಯಲ್ಲಿದ್ದ ಎಲ್ಲರೂ ಘೋಷಣೆಗೆ ಸಹಕಾರ ನೀಡುವಂತೆ ಮತ್ತೊಮ್ಮೆ ಹೇಳಿದರು. ಆ ಬಳಿಕವೂ ಕೆಲವರು ಮಾತ್ರ ಸಹಕರಿಸಿದ್ದರಿಂದ ತಾಳ್ಮೆ ಕಳೆದುಕೊಂಡ ಕೇಂದ್ರ ಸಚಿವೆ,” ಇಲ್ಲಿ ಕೂತಿರುವ ಕೆಲವರು ಕೈ ಕಟ್ಟಿ ಕುಳಿತಿದ್ದಾರೆ. ಭಾರತವು ನನ್ನ ತಾಯಿ ಮಾತ್ರವೇ? ನಿಮಗೆ ತಾಯಿಯಲ್ಲವೇ? ಘೋಷಣೆ ಕೂಗಲು ಏನು ಕಷ್ಟ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ಬಳಿಕ ಹಳದಿ ಬಟ್ಟೆ ಧರಿಸಿದ್ದ ಮಹಿಳೆಯೋರ್ವರನ್ನು ಮೀನಾಕ್ಷಿ ಲೇಖಿ ಬೊಟ್ಟು ಮಾಡಿದರು. ಈ ವೇಳೆಯೂ ಪ್ರತಿಕ್ರಿಯೆ ನೀಡದ್ದಕ್ಕೆ ಆಕ್ರೋಶಗೊಂಡ ಸಚಿವೆ, “ಒಂದು ವೇಳೆ ನಿಮಗೆ ಭಾರತ್ ಮಾತಾಕಿ ಘೋಷಣೆ ಕೂಗುವುದಕ್ಕೆ ಕಷ್ಟವಾಗುವುದಾರೆ ಇಲ್ಲಿಂದ ಹೋಗಬಹುದು” ಎಂದು ಸೂಚಿಸಿದರು. ಈ ಎಲ್ಲ ಬೆಳವಣಿಗೆಗಳು ಕಾರ್ಯಕ್ರಮದಲ್ಲಿದ್ದ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿರುವ ಸ್ವಾಯತ್ತ ಸಂಸ್ಥೆಯಾದ ನೆಹರು ಯುವ ಕೇಂದ್ರ, ಖೇಲೋ ಇಂಡಿಯಾ ಮತ್ತು ತಪಸ್ಯ ಸಂಘಟನೆಯು ‘ಅವೇಕ್ ಯೂತ್ ಕಾನ್‌ಕ್ಲೇವ್’ ಸಮಾವೇಶವನ್ನು ಆಯೋಜಿಸಿತ್ತು.

ಕೇಂದ್ರ ಸಚಿವೆಯ ಈ ರೀತಿಯ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿರುವ ದೇಶಾಭಿಮಾನ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತೋರುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...