ಉನ್ನಾಂವ್ ಪ್ರಕರಣದ ಅಪರಾಧಿಯ ಶಿಕ್ಷೆ ಅಮಾನತು; ಬಿಜೆಪಿ ಮತ್ತು ಪ್ರಿಯಾಂಕ್‌ ಖರ್ಗೆ ನಡುವೆ ವಾಕ್‌ಸಮರ!

Date:

ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಅಮಾನತುಗೊಳಿಸಿದೆ. ಈ ವಿಚಾರವು ಕರ್ನಾಟಕದಲ್ಲಿ ಬಿಜೆಪಿ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ಜಟಾಪಟಿಗೆ ಕಾರಣವಾಗಿದೆ. ಅತ್ಯಾಚಾರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತು ಮಾಡಲಾಗಿರುವುದಕ್ಕೆ ಕೇಂದ್ರ ಸರ್ಕಾರವನ್ನು ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ. ಅವರು ಬಳಸಿದ್ದ ಎಐ ರಚಿತ ಚಿತ್ರವನ್ನು ಖಂಡಿಸಿರುವ ಬಿಜೆಪಿ, ಸಚಿವರು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದೆ.

- Advertisement -

ದೆಹಲಿ ಹೈಕೋರ್ಟ್‌ನ ಆದೇಶ ಹೊರಬಿದ್ದ ಬಳಿಕ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದ ಪ್ರಿಯಾಂಕ್‌ ಖರ್ಗೆ, ಚಿತ್ರವೊಂದನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ, ‘ಕಂಗ್ರಾಜುಲೇಷನ್ಸ್‌ ಮೋದಿ, ನಿಮ್ಮ ಬೇಟಿ ಬಚಾವೋ – ಬೇಟಿ ಪಡಾವೋ ಘೋಷಣೆಯು ಹೊಸ ಅರ್ಥ ಪಡೆದುಕೊಂಡಿದೆ’ ಎಂದು ಟೀಕಿಸಿದ್ದರು. ಅವರ ಹಂಚಿಕೊಂಡಿದ್ದ ಎಐ ರಚಿತ ಚಿತ್ರದಲ್ಲಿ, ದೆಹಲಿಯ ತಿಹಾರ್ ಜೈಲಿನ ಎದುರು ಸೆಂಗರ್‌ಗೆ ಕೆಲವು ಬಿಜೆಪಿಗರು ಹಾರ ಹಾಕಿ ಸ್ವಾಗತಿಸುತ್ತಿರುವುದು ಕಂಡುಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಚಿತ್ರವನ್ನು ಬಳಸಿದ್ದಕ್ಕಾಗಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಕರ್ನಾಟಕ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. “ಸ್ವಯಂ ಘೋಷಿತ ‘ಫ್ಯಾಕ್ಟ್‌ ಚೆಕರ್’ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದಾಳಿ ನಡೆಸುವ ಉದ್ದೇಶದಿಂದ ಸಾರ್ವಜನಿಕರನ್ನು ತಪ್ಪು ದಾರಿಗೆಳೆಯಲು ಎಐ ಚಿತ್ರವನ್ನು ಹಂಚಿಕೊಂಡಿದ್ದಾರೆ. ಭಾರತದ ಹೆಣ್ಣುಮಕ್ಕಳ ಸಬಲೀಕರಣದ ಪ್ರಮುಖ ಯೋಜನೆ ‘ಬೇಟಿ ಬಚಾವೋ, ಬೇಟಿ ಪಡಾವೋ’ದ ಅರ್ಥವನ್ನು ಸುಳ್ಳುಗಳ ಮೂಲಕ ವ್ಯಂಗ್ಯವಾಡಿದ್ದಾರೆ” ಎಂಧು ಆರೋಪಿಸಿದೆ.

“ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತು ಮಾಡುವುದು ಸರ್ಕಾರದ ನಿರ್ಧಾರವಲ್ಲ. ಅದು ನ್ಯಾಯಾಲಯದ ಆದೇಶವಾಗಿದೆ. ಆ ಆದೇಶವನ್ನು ಸಿಬಿಐ ಪ್ರಶ್ನಿಸಲಿದೆ. ಅಲ್ಲದೆ, ಸೆಂಗರ್‌ ಮತ್ತೊಂದು ಪ್ರಕರಣದಲ್ಲಿ ಇನ್ನೂ ಜೈಲಿನಲ್ಲಿಯೇ ಇದ್ದಾರೆ. ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ಪೋಸ್ಟ್ ಅವರದೇ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ವಿರೋಧಿ ಮಸೂದೆಯ ಉಲ್ಲಂಘನೆಯಾಗಿದೆ” ಎಂದು ಬಿಜೆಪಿ ಹೇಳಿದೆ.

ಈ ಬೆನ್ನಲ್ಲೇ ಮತ್ತೊಂದು ಪ್ರಿಯಾಂಕ್‌ ಖರ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ, ಗುಜರಾತ್‌ನ ಬಿಲ್ಕೀಸ್‌ ಬಾನೊ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಹೂವಿನ ಹಾರ ಹಾಕಿ ಸನ್ಮಾನಿಸಿದ ಸಂದರ್ಭದ ಚಿತ್ರವನ್ನು ಬಳಿಸಿರುವ ಪ್ರಿಯಾಂಕ್‌ ಖರ್ಗೆ, “ನಾನು ಹಿಂದಿನ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದ ಚಿತ್ರವು ಎಐನಿಂದ ರಚನೆ ಮಾಡಿರಬಹುದು. ಅದು ಕಣ್ತಪ್ಪಿ ಪೋಸ್ಟ್ ಆಗಿರಬಹುದು. ಆದರೆ ನಿಮ್ಮ (ಬಿಜೆಪಿ) ಖ್ಯಾತಿಯು (ಬಿಲ್ಕೀಸ್‌ ಬಾನೊ ಪ್ರಕರಣದ ಚಿತ್ರ) ನಿಮ್ಮ ಮುಂದೆಯೇ ಇದೆ” ಎಂದು ಹೇಳಿದ್ದಾರೆ.

“ಬಿಜೆಪಿ ಅಪರಾಧಿಗಳನ್ನು ಗೌರವಿಸುವುದು ಮತ್ತು ರಕ್ಷಿಸುವುದನ್ನು ಮುಂದುವರಿಸಿದೆ. ಕರ್ನಾಟಕದಲ್ಲಿ ಪೋಕ್ಸೋ ಆರೋಪಿಗಳ ವಿರುದ್ಧ ಯಾಕೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ? ಈ ನಾಯಕನನ್ನು ಇನ್ನೂ ನಿಮ್ಮ ಪಕ್ಷದ ‘ಮಾರ್ಗದರ್ಶಕ’ ಹಾಗೂ ‘ಮಾರ್ಗದರ್ಶಿ ಬೆಳಕು’ ಎಂಬುದಾಗಿಯೇ ಬಿಂಬಿಸಲಾಗುತ್ತಿದೆ ಅಲ್ಲವೇ?” ಎಂದು ಯಡಿಯೂರಪ್ಪನವರ ಹೆಸರನ್ನು ಉಲ್ಲೇಖಿಸಿದೆ ಅವರ ಬಗ್ಗೆ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...