ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯಿಂದ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲು: ಹೆಚ್ ಡಿ ಕುಮಾರಸ್ವಾಮಿ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್‌’ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ, ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಆರೋಪಿಸಿದ್ದಾರೆ.

- Advertisement -

ಸೋಮವಾರ ಸರ್ಕಾರವನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ” ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

“ಇಂದಿನ ಬೆಂಗಳೂರು ಬಂದ್‌ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ. ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು” ಎಂದು ಸಿದ್ದರಾಮಯ್ಯ ಸರ್ಕಾರವನ್ನು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

“ಖಾಸಗಿ ಸಾರಿಗೆ ಒಕ್ಕೂಟದವರನ್ನು ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು” ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....