ಬೆಂಗಳೂರಿನಲ್ಲಿ ವಿಪಕ್ಷಗಳ ಒಗ್ಗಟ್ಟಿನ ಸಭೆ : ಯುಪಿಎ ಹೆಸರು ಬದಲಾವಣೆ ಸಾಧ್ಯತೆ

Date:

ಬೆಂಗಳೂರಿನಲ್ಲಿ ಇಂದಿನಿಂದ(ಜುಲೈ 17) ಆರಂಭಗೊಂಡಿರುವ ಎರಡು ದಿನಗಳ ವಿಪಕ್ಷಗಳ ಮಹಾ ಒಗ್ಗಟ್ಟಿನ ಸಭೆಯಲ್ಲಿ ಸಂಯುಕ್ತ ಪ್ರಜಸತ್ತಾತ್ಮಕ ಒಕ್ಕೂಟ (ಯುಪಿಎ) ಹೆಸರು ಬದಲಾವಣೆಯಾಗುವ ಸಾಧ್ಯತೆಯಿದೆ.

- Advertisement -

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಈ ಬಗ್ಗೆ ಪಕ್ಷವು ಕೇವಲ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಸಭೆಯಲ್ಲಿ ಸಾಮೂಹಿಕವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ನಾವು ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದನ್ನು ಕಾಂಗ್ರೆಸ್ ಮಾತ್ರ ನಿರ್ಧರಿಸುತ್ತಿಲ್ಲ ಆದ ಕಾರಣ ಚರ್ಚಿಸಲಿರುವ ವಿಷಯಗಳೇನು ಎಂಬುದನ್ನು ಈಗ ಹೇಳುವುದಿಲ್ಲ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಕುಳಿತು ಒಗ್ಗಟ್ಟಿನಿಂದ ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕಾಂಗ್ರೆಸ್, ಟಿಎಂಸಿ, ಆರ್‌ಜೆಡಿ, ಜೆಡಿಯು, ಎಎಪಿ ಸೇರಿದಂತೆ 20 ಕ್ಕೂ ಹೆಚ್ಚು ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆಯಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ 2004 ರಿಂದ 2014 ರವರೆಗೆ ಎರಡು ಅವಧಿಗೆ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಸೋನಿಯಾ ಗಾಂಧಿ ಮೈತ್ರಿಕೂಟದ ಅಧ್ಯಕ್ಷರಾಗಿದ್ದರು.

ಸಭೆಯಲ್ಲಿ ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಮೈತ್ರಿಗಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸೇರಿದಂತೆ ರ್‍ಯಾಲಿಗಳು, ಸಮಾವೇಶಗಳು ಮತ್ತು ಆಂದೋಲನಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳ ಜಂಟಿ ಪ್ರಚಾರ ಕಾರ್ಯಕ್ರಮವನ್ನು ರೂಪಿಸಲು ಉಪ ಸಮಿತಿಯನ್ನು ರಚಿಸುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ಜೈಶಂಕರ್, ಡೆರಿಕ್ ಓಬ್ರಿಯಾನ್‌ ಸೇರಿ ರಾಜ್ಯಸಭೆಗೆ ಅವಿರೋಧ ಆಯ್ಕೆಯಾಗಲಿರುವ 11 ಮಂದಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದೊಂದಿಗೆ ಸಭೆ ಪ್ರಾರಂಭವಾಗಲಿದ್ದು, ಸಭೆಯ ನಂತರ ಸಂಜೆ 4 ಗಂಟೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಲಾಗಿದೆ.

2024 ರ ಲೋಕಸಭೆ ಚುನಾವಣೆಗೆ ಮುನ್ನ ಒಗ್ಗಟ್ಟನ್ನು ರೂಪಿಸಲು ವಿರೋಧ ಪಕ್ಷಗಳ ಮೊದಲ ಸಭೆಯು ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ನಡೆಯಿತು. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಎರಡನೇ ಸಭೆ ಇದಾಗಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಜಿಸಿರುವ ಔತಣಕೂಟ ಸೋಮವಾರ ನಡೆಯಲಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಾಳೆ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಒಗ್ಗಟ್ಟಿನ ಸಭೆಯ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಕಳೆದ ತಿಂಗಳು ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆ ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ದಿಗ್ಭ್ರಮೆಗೊಂಡಿದೆ. ಪಾಟ್ನಾದ ಸಭೆಯ ನಂತರ ಪ್ರಧಾನಿ ಇದ್ದಕ್ಕಿದ್ದಂತೆ ಎನ್‌ಡಿಎ ಬಗ್ಗೆ ಯೋಚಿಸುತ್ತಿದ್ದಾರೆ. ಎನ್‌ಡಿಎಗೆ ಹೊಸ ಜೀವ ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಇದ್ದಕ್ಕಿದ್ದಂತೆ, ನಾಳೆ(ಜುಲೈ 18) ಎನ್‌ಡಿಎ ಸಭೆ ಕರೆಯಲಾಗಿದೆ ಎಂದು ವರದಿಯಾಗಿದೆ. ಇದು ಪಾಟ್ನಾದಲ್ಲಿ ನಡೆದ ಸಭೆಯ ಫಲಿತಾಂಶವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...