ಆಡಳಿತ ಪಕ್ಷದವರಿಂದಲೇ ಸಿಎಂ ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ

Date:

Advertisements

ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡಿದರೆ ಮುಂದೆ ಎಂದೂ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ” ಎಂದರು.

“ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ. ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡಿಲ್ಲ” ಎಂದು ತಿಳಿಸಿದರು.

Advertisements

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಕುರಿತು ಮಾತನಾಡಿ, “ಬೇರೆ ಯಾವುದೇ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ ಬಹಳ ಸ್ಪಷ್ಟವಾಗಿದೆ, ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ” ಎಂದರು.

ಜಾತಿ ಗಣತಿ ಚರ್ಚೆಯಾಗಲಿ

ಜಾತಿಗಣತಿ ವಿಷಯವಾಗಿ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಹರಿಪ್ರಸಾದ್ ಮನದಾಳದ ಮಾತು ಹೇಳಿದ್ದಾರೆ‌. ಜಾತಿಗಣತಿ ಮುಖ್ಯನೋ ಸರ್ಕಾರ ಬೀಳೋದು ಮುಖ್ಯವೋ ಅನ್ನುವುದನ್ನು ಬಿ‌ ಕೆ ಹರಿಪ್ರಸಾದ್ ಸ್ಪಷ್ಟ ಪಡಿಸಲಿ. ಜಾತಿ ಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು. ನಿಖರವಾಗಿ ಜಾತಿ ಗಣತಿಯ ಆದೇಶವಿಲ್ಲ” ಎಂದು ಹೇಳಿದರು.

“ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಕಮಿಟಿ ಕೊಟ್ಟ ವರದಿಯನ್ನು ಯಾಕೆ ಸ್ವೀಕರಸಿಲ್ಲ. ಜಯಪ್ರಕಾಶ್ ಹೆಗಡೆ ಅವರು ಆಯೋಗದ ಅಧ್ಯಕ್ಷರಾಗಿ 2-3 ತಿಂಗಳಲ್ಲಿ ಹೇಗೆ ವರದಿ ಕೊಡುತ್ತಾರೆ? ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ದರು. ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಉದ್ದಾರ ಮಾಡುತ್ತೇವೆ ಅಂತ ಹೇಳುತ್ತಾರೆ. ಗೊಂದಲ ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ದ ಮುಡಾ ಹಗರಣದ ಆರೋಪ ಬಂದಮೇಲೆ ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮಾತಾಡುತ್ತಾರೆ. ಜಾತಿ ಗಣತಿ ವರದಿ ಬಿಡಿಗಡೆಗೆ ಅವರ ಪಕ್ಷದಲ್ಲಿ ಮೊದಲಿನಿಂದಲೂ ವಿರೋಧ ಇದೆ. ಡಿಸಿಎಂ ಡಿ ಕೆ ಶಿವಕುಮಾರ್, ಶಾಸಕ ಶಾಮನೂರ ಶಿವಶಂಕರಪ್ಪ ವಿರೋಧಿಸಿ ಸಹಿ ಮಾಡಿಕೊಟ್ಟಿದ್ದಾರೆ. ಅವರಲ್ಲಿನೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ. ಆದಷ್ಟು ಬೇಗ ಜಾತಿಗಣತಿ ಹೊರಬಂದು ಚರ್ಚೆಯಾಗಲಿ” ಎಂದು ಹೇಳಿದರು.

ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಮರು ಸ್ಥಾಪಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಆ ಬಗ್ಗೆ ಮಾಹಿತಿ ಇಲ್ಲ. ಅವರು ಮೊನ್ನೆಯೇ ಹೇಳಿದ್ದಾರೆ ಮಾಡಲಿ. ನಮ್ಮ ಪಕ್ಷ ತನ್ನದೇ ಕಾರ್ಯಕರ್ತ ಪಡೆ ಹೊಂದಿದೆ. ನಮ್ಮದು ರಾಷ್ಟ್ರೀಯ ಪಕ್ಷ, ನಾವು ನಿರಂತರ ನಮ್ಮ ಕೆಲಸ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X