ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ

Date:

  • ಯಾವ ಕ್ಷಣದಲ್ಲಾದರೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ
  • ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮನ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ.

ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದ್ದು, “ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ” ಎಂದು ಪತ್ರದಲ್ಲಿ ಸೂಚಿಸಲಾಗಿದೆ. ಇದರಿಂದಾಗಿ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲು ಕೇಂದ್ರ ಚುನಾವಣೆ ಆಯೋಗ ಸಿದ್ಧತೆ ನಡೆಸಿದೆ. ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಪ್ರಿಲ್‌ ಮೊದಲ ವಾರದಲ್ಲಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಹಾಗೂ ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿ ಘೋಷಿಸಲಿದ್ದಾರೆ. ಆ ಕ್ಷಣದಿಂದಲೇ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ದಿನಾಂಕ ಘೋಷಣೆಗೂ ಮುನ್ನ ಮೋದಿ ಆಗಮನ

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್‌ಪಿಪಿ ಕೂಡ ತಯಾರಿ ನಡೆಸಿವೆ. ಚುನಾವಣೆ ಕಾವು ಏರತೊಡಗಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಹಾಗೂ ವೈಟ್‌ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾರ್ಚ್‌ 25) ರಾಜ್ಯಕ್ಕೆ ಆಗಮಿಸಲಿದ್ದಾರೆ. ಹಾಗೆಯೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...