ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ

Date:

Advertisements
  • ಅಮೆರಿಕಾ ಪ್ರವಾಸದ ಬಳಿಕ ಮಾಹಿತಿ ಹಂಚಿಕೊಂಡ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ
  • ರಾಜ್ಯದಲ್ಲಿ ಕೆಲವು ಕಂಪನಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ

ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ಪ್ರಕಟವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದರು.

ಅಮೆರಿಕಕ್ಕೆ 12 ದಿನಗಳ ವ್ಯಾಪಾರ ಉತ್ತೇಜನಾ ಪ್ರವಾಸ ತೆರಳಿದ್ದ ರಾಜ್ಯ ನಿಯೋಗದ ನೇತೃತ್ವ ವಹಿಸಿದ್ದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರು ರಾಜ್ಯಕ್ಕೆ ವಾಪಸ್ಸಾಗಿದ್ದು, ಗುರುವಾರ ವಿಕಾಸಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, “ಕೆಲವು ಕಂಪನಿಗಳು ಹೊಸದಾಗಿ ರಾಜ್ಯದಲ್ಲಿ ಕಾರ್ಯಾಚರಣೆ ಯೋಜನೆ ಹೊಂದಿವೆ.‌ ಇನ್ನು ಕೆಲವು ಕಂಪನಿಗಳು ಈಗಾಗಲೇ ಇಲ್ಲಿ ಘಟಕಗಳನ್ನು ಹೊಂದಿದ್ದು, ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ” ಎಂದರು.

Advertisements

“ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಈಗ ಕರ್ನಾಟಕ ಸೇರಿದಂತೆ ‌ದೇಶದ‌ ಬಹುತೇಕ ರಾಜ್ಯಗಳು ನಡೆಸುತ್ತಿವೆ. ಇಂತಹ ಸಮಾವೇಶದ ಜೊತೆಗೆ ಹೊಸ ಉಪಕ್ರಮವೊಂದನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಲೋಚನೆಯಾಗಿತ್ತು. ಹೀಗಾಗಿ, ಉದ್ಯಮಿಗಳಿರುವ ಹಾಗೂ ಉದ್ಯಮ ಸಂಸ್ಥೆಗಳ ಜಾಗಕ್ಕೆ ನಾವೇ ಹೋಗಿ ನಮ್ಮಲ್ಲಿರುವ ಅನುಕೂಲತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಮಪ್ಪ ಲಮಾಣಿ

“ಮುಖ್ಯವಾಗಿ ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಏರೋಸ್ಪೇಸ್ & ರಕ್ಷಣೆ, ಆಟೋ/ಇವಿ, ಉತ್ಪಾದನೆ ಮತ್ತು ಮೆಡ್-ಟೆಕ್ ವಲಯಗಳಲ್ಲಿ ಹೂಡಿಕೆ ಅವಕಾಶಗಳನ್ನು ಅವಲೋಕಿಸಲಾಗಿದೆ. ಅಪ್ಲೈಡ್ ಮಟೀರಿಯಲ್ಸ್, ಎಎಂಡಿ, ಜುನಿಪರ್, ಗ್ಲೋಬಲ್ ಫೌಂಡ್ರೀಸ್, ಲ್ಯಾಮ್ ರಿಸರ್ಚ್, ಬೋಯಿಂಗ್, ಕ್ರಿಪ್ಪನ್, ಡೆಲ್, ಎಂಕೆಎಸ್ ಇನ್‌ಸ್ಟ್ರುಮೆಂಟ್ಸ್, ಟೆರಾಡೈನ್, ಜಿಇ ಹೆಲ್ತ್ ಕೇರ್, ಇಂಟೆಲ್‌ಸ್ಯಾಟ್, ಆರ್‌ಟಿಎಕ್ಸ್, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್, ಆಪಲ್ ಮತ್ತು ವಾಟರ್ಸ್‌ ಕಾರ್ಪ್ ನಂತಹ ಮುಂಚೂಣಿ ಕಂಪನಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ” ಎಂದು ಎಂ ಬಿ ಪಾಟೀಲ ತಿಳಿಸಿದರು.

“ಜಂಟಿ ಕೌಶಲ್ಯಾಭಿವೃದ್ಧಿ ಉಪಕ್ರಮಗಳು, ಪೂರೈಕೆದಾರರ ನೆಲೆಯ ವಿಸ್ತರಣೆ, ಆರ್ & ಡಿ ಪರಿಸರ ವ್ಯವಸ್ಥೆ ಬಲಪಡಿಸುವುದು ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಬಗೆಗೂ ಸಮಾಲೋಚನೆ ನಡೆಸಲಾಗಿದೆ. ಬದಲಾಗುತ್ತಿರುವ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕದ ಉದ್ಯಮಿಗಳು ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿದ್ದಾರೆ” ಎಂದರು.

2024 ಡಿಸೆಂಬರ್ ಅಥವಾ 2025ರ ಜನವರಿಯಲ್ಲಿ ಜಿಮ್: ಪಾಟೀಲ

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ವತಿಯಿಂದ ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (ಜಿಮ್) 2024ರ ಕೊನೆಯಲ್ಲಿ ಅಥವಾ 2025ರ ಆರಂಭದಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.

ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, “ಬಂಡವಾಳ ಆಕರ್ಷಿಸುವ ಸಲುವಾಗಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದು ಅದರಲ್ಲಿ ಈ ಅಮೆರಿಕಾ ಭೇಟಿಯೂ ಸೇರಿದೆ. ಮಾನವ ಸಂಪನ್ಮೂಲದ ಬೇಡಿಕೆಗನುಗುಣವಾಗಿ ಎಂಜಿನಿಯರ್ ಗಳಿಗೆ ತರಬೇತಿ ನೀಡುವ ಸಂಬಂಧ ಎಎಂಡಿ ಸಂಸ್ಥೆ ಜತೆ‌ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ. ಈ ಸಂಸ್ಥೆ 800 ಎಂಜಿನಿಯರ್ ಗಳನ್ನು‌ ಭಾರತದಲ್ಲಿ ನೇಮಕ‌ ಮಾಡಿಕೊಳ್ಳಲಿದೆ” ಎಂದು ಹೇಳಿದರು.

“ನಾವೀನ್ಯತಾ ಸೂಚ್ಯಂಕದಲ್ಲಿ ಕರ್ನಾಟಕ18ನೇ ಸ್ಥಾನ‌ ಪಡೆದಿದ್ದು ಮುಂದಿನ‌ ದಿನಗಳಲ್ಲಿ 10ರೊಳಗೆ ಸ್ಥಾನ‌ ಪಡೆಯುವ ನಿಟ್ಟಿನಲ್ಲಿ ಕೆಲಸ‌ ಮಾಡಲಿದೆ” ಖರ್ಗೆ ತಿಳಿಸಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X