ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿಯು ಬುಧವಾರ (ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿದೆ. ಇದೀಗ, ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿರುವ ಅಮೆರಿಕಾ, “ಕೇಜ್ರಿವಾಲ್ ಪ್ರಕರಣದಲ್ಲಿ ನ್ಯಾಯೋಚಿತ, ಪಾರದರ್ಶಕತೆ ಹಾಗೂ ಸಮಯಕ್ಕೆ ಸರಿಯಾದ ಕಾನೂನು ಪ್ರಕ್ರಿಯೆಯನ್ನು ನಡೆಸಬೇಕು” ಎಂದು ಪುನರುಚ್ಛರಿಸಿದೆ.

ಭಾರತವು ಅಮೆರಿಕ ರಾಯಭಾರಿ ಕಚೇರಿಗೆ ಸಮನ್ಸ್ ನೀಡಿದ ಬಗ್ಗೆ ಸುಮಾರು 40 ನಿಮಿಷಗಳ ಸಭೆ ನಡೆಸಿರುವುದಾಗಿ ಅಮೆರಿಕಾ ವಕ್ತಾರ ಮ್ಯಾಥ್ಯೂ ಅಲನ್ ಮಿಲ್ಲರ್ ತಿಳಿಸಿದ್ದಾರೆ. “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಇತರೆ ಪ್ರಕರಣಗಳ ಬಗ್ಗೆ ನಾವು ನಿರಂತರವಾಗಿ ಗಮನಹರಿಸುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿರುವ ವಿಚಾರದ ಬಗ್ಗೆಯೂ ಮಿಲ್ಲರ್ ಪ್ರತಿಕ್ರಿಯಿಸಿದ್ದಾರೆ. “ತೆರಿಗೆ ಅಧಿಕಾರಿಗಳು ಕಾಂಗ್ರೆಸ್‌ನ ಕೆಲವು ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿದ್ದಾರೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ರಚಾರಕ್ಕೆ ತೊಂದರೆಯಾಗಲಿದೆ ಎಂಬ ವಿಷಯಗಳನ್ನು ಕೂಡ ಗಮನಿಸಿದ್ದೇವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

“ನಾವು ಯಾವುದೇ ಆಡಳಿತದ ಖಾಸಗಿ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ಈ ಎರಡು ವಿಚಾರದಲ್ಲಿ ನ್ಯಾಯೋಚಿತ ಹಾಗೂ ಪಾರದರ್ಶಕತೆ, ಸಮಯಕ್ಕೆ ಸರಿಯಾದ ಕಾನೂನು ಪ್ರಕ್ರಿಯೆಯನ್ನು ನಡೆಸುವಂತೆ ಒತ್ತಾಯಿಸುತ್ತೇವೆ. ಇದನ್ನು ಯಾರೂ ಕೂಡಾ ವಿರೋಧಿಸಬೇಕೆಂದು ನಮಗೆ ಅನಿಸುವುದಿಲ್ಲ” ಎಂದು ಮಿಲ್ಲರ್ ಒತ್ತಿ ಹೇಳಿದರು.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು ಇಡಿ ಕಸ್ಟಡಿ ಇಂದಿಗೆ (ಮಾರ್ಚ್ 28) ಕೊನೆಯಾಗಲಿದೆ. ಕೇಜ್ರಿವಾಲ್ ಇಂದು ಹೈಕೋರ್ಟ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್ ತಿಳಿಸಿದ್ದಾರೆ.

ಇನ್ನು ಹಳೆಯ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯನ್ನು ಮರುಮೌಲ್ಯಮಾಪನ ಮಾಡುತ್ತಿರುವ ಆದಾಯ ತೆರಿಗೆ ಇಲಾಖೆಯು ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದೆ. ಈ ಮೂಲಕ ವಿಪಕ್ಷಗಳನ್ನು ಕೇಂದ್ರ ಸರ್ಕಾರವು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...