ಹಾಸನ | ನೃತ್ಯದಲ್ಲಿ ಕಮಲ ಹೂವು ಬಳಕೆ; ಶಾಸಕ ಶಿವಲಿಂಗೇಗೌಡ ಆಕ್ಷೇಪ

Date:

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ನೃತ್ಯ ಮಾಡುತ್ತಿದ್ದ ವೇಳೆ ಕಮಲದ ಹೂವು ಬಳಸಿದ್ದಕ್ಕೆ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಶುಕ್ರವಾರ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಈ ವೇಳೆ, ಮಕ್ಕಳು ಹಾಡೊಂದಕ್ಕೆ ನೃತ್ಯ ಮಾಡಿದ್ದಾರೆ. ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳ ಕೈಗೆ ಶಿಕ್ಷಕಿಯೊಬ್ಬರು ಕಮಲ ಹೂವು ಕೊಟ್ಟಿದ್ದಾರೆ. ಶಿಕ್ಷಕಿ ಹೂವು ಕೊಟ್ಟಿದ್ದನ್ನು ಶಾಸಕ ಶಿವಲಿಂಗೇಗೌಡ ಖಂಡಿಸಿದ್ದು, ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳು ರಾಷ್ಟ್ರೀಯ ಚಿಹ್ನೆಗಳನ್ನು ಹಿಡಿದು ನೃತ್ಯ ಮಾಡುತ್ತಿದ್ದರು. ಅದೇ ರೀತಿ ಕಲಮ ರಾಷ್ಟ್ರೀಯ ಹೂವು ಆಗಿರುವುದರಿಂದ, ಆ ಹೂವನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿತ್ತು ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಮಲ ಹೂವು ಬಳಸಿದ್ದನ್ನು ಪ್ರಶ್ನಿಸಿರುವ ಶಾಸಕ, “ವಿದ್ಯಾರ್ಥಿಗಳಿಗೆ ಕಮಲ ಯಾಕೆ ಕೊಟ್ಟಿದ್ದೀರಿ. ಮಕ್ಕಳನ್ನು ಇನ್ನೇನ್ ಉದ್ದಾರ ಮಾಡ್ತೀರಿ” ಎಂದು ಶಿಕ್ಷಕಿಗೆ ಗದರಿದ್ದಾರೆ ಎಂದು ವರದಿಯಾಗಿದೆ.

ಶಿವಲಿಂಗೇಗೌಡರ ಮಾತಿಗೆ ಶಿಕ್ಷಕಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನನಗೆ ಎದುರು ಮಾತನಾಡುತ್ತೀರಾ. ನೋಟೀಸ್‌ ನೀಡಬೇಕಾಗುತ್ತದೆ ಎಂದು ಶಿವಲಿಂಗೇಗೌಡ ಎಚ್ಚರಿಕೆ ಮಾತನಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...