ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅಧಿಕಾರ ಸ್ವೀಕಾರ

Date:

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದಿಸಿದರು.

ಸ್ಪೀಕರ್ ಸ್ಥಾನಕ್ಕೆ ಯು ಟಿ ಖಾದರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು. ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠದ ಬಳಿಗೆ ಯು ಟಿ ಖಾದರ್ ಅವರನ್ನು ಕರೆತಂದರು. ಬಳಿಕ ಶುಭಾಶಯ ಕೋರಲಾಯ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಡಾ. ಜಿ ಪರಮೇಶ್ವರ್‌ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್‌ಗೆ ಶುಭಾಶಯ ಕೋರಿದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೂತನ ಸಚಿವರನ್ನು ಸದನಕ್ಕೆ ಪರಿಚಯ ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಎಂ.ಪಿ ಪ್ರಕಾಶ್‌ ಪುತ್ರಿ ಎಂ.ಪಿ ಲತಾ: ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿ ಕಾಂಗ್ರೆಸ್‌ ಸೇರ್ಪಡೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...