- ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ ಗ್ಯಾರಂಟಿಗಳಿಗೆ 11 ಸಾವಿರ ಕೋಟಿ ಬಳಕೆ
- ಎಲ್ಲ ಉಚಿತ ಖಚಿತ ನಿಶ್ಚಿತ ಅನ್ನುವುದೇ ಒಂದು ದೊಡ್ಡ ಸುಳ್ಳು: ಯತ್ನಾಳ್ ಟೀಕೆ
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಬಳಕೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಶಾಸಕ ಬಸನಗೌಡ ಪಾಟೀಲ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣ ಬಳಸಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಕಾಳಜಿ ಇಲ್ಲದೆ ಘೋಷಣೆಗಳಿಗಾಗಿ ಹಣ ಬಳಕೆ ಮಾಡುತ್ತಿರುವುದು ಖಂಡನೀಯ” ಎಂದು ಟೀಕಿಸಿದ್ದಾರೆ.
“ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವಾಗ ಹಣ ಎಲ್ಲಿಂದ ಕ್ರೋಡೀಕರಿಸುವುದು ಎಂದು ಯೋಚಿಸಬೇಕಲ್ಲವೇ? ಎಲ್ಲ ಉಚಿತ ಖಚಿತ ನಿಶ್ಚಿತ ಅನ್ನುವುದೇ ಒಂದು ದೊಡ್ಡ ಸುಳ್ಳು”ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?
“ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಘಟಕ ಯೋಜನೆ ಅನುದಾನದಲ್ಲಿ 11 ಸಾವಿರ
ಕೋಟಿಯನ್ನು ಐದು ಗ್ಯಾರಂಟಿಗಳ ಜಾರಿಗೆ ಬಳಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.
“ಇದರಲ್ಲಿ 7,570 ಕೋಟಿ ಪರಿಶಿಷ್ಟ ಜಾತಿಗೆ ಮತ್ತು 3,430 ಕೋಟಿ ಪರಿಶಿಷ್ಟ ಪಂಗಡಗಳ ಜನರಿಗಾಗಿ ಬಳಸಿದ್ದೇವೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ 11 ಸಾವಿರ ಕೋಟಿ ಗ್ಯಾರಂಟಿಗಳಿಗೆ ನೀಡಲಾಗಿದೆ” ಎಂದು ಸಚಿವರು ಅನುದಾನ ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ.