ಉತ್ತರ ಪ್ರದೇಶ | ಶಾಲೆಗಳಿಗಿಲ್ಲ ಕ್ರಿಸ್‌ಮಸ್‌ ರಜೆ; ಬದಲಿಗೆ, ವಾಜಪೇಯಿ ಜನ್ಮ ದಿನ ಆಚರಣೆ

Date:

ಉತ್ತರ ಪ್ರದೇಶದಲ್ಲಿ ಕ್ರಿಸ್‌ಮಸ್‌ ಆಚರಣೆಗಾಗಿ ಶಾಲೆಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರದ ಆದೇಶದಂತೆ ಶಾಲೆಗಳನ್ನು ತೆರೆಯಲಾಗಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರವು ವಿದ್ಯಾರ್ಥಿಗಳ ಕ್ರಿಸ್‌ಮಸ್ ರಜೆಯನ್ನು ಕಸಿದುಕೊಂಡಿದೆ. ಇದು, ಬಿಜೆಪಿ ಕೋಮು ರಾಜಕಾರಣದ ಮುಂದುವರೆಕೆಯೆಂದು ರಾಜಕೀಯ ವಿಶ್ಲೇಷಕರು ಮತ್ತು ವಿಪಕ್ಷಗಳು ಆರೋಪಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇತ್ತೀಚೆಗೆ, ಉತ್ತರ ಪ್ರದೇಶದಲ್ಲಿ ಕ್ರಿಸ್‌ಮಸ್ ಆಚರಣೆ ಬದಲಿಗೆ, ವಾಜಪೇಯಿ ಜನ್ಮ ದಿನಾಚರಣೆಯ ಅಂಗವಾಗಿ ‘ಬಾಲ ಗೌರವ ಮತ್ತು ಉತ್ತಮ ಆಡಳಿತ ದಿನ’ವನ್ನು ಆಚರಿಸಬೇಕೆಂದು ಬಜರಂಗ ದಳ ಆಗ್ರಹಿಸಿತ್ತು. ಈ ಬೆನ್ನಲ್ಲೇ, ಸರ್ಕಾರವು ಕ್ರಿಸ್‌ಮಸ್ ರಜೆಯನ್ನು ರದ್ದಗೊಳಿಸಿ, ವಾಜಪೇಯಿ ಜನ್ಮದಿನೋತ್ಸವ ಆಚರಿಸುವುದಂತೆ ಆದೇಶಿಸಿದೆ.

ಸರ್ಕಾರವು ಬುಧವಾರ ಹೊರಡಿಸಿದ್ದ ಆದೇಶದಲ್ಲಿ, “ಗುರುವಾರ (ಡಿ.25) ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗಬೇಕು. ವಾಜಪೇಯಿ ಅವರನ್ನು ಗೌರವಿಸಲು ಭಾಷಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಮರಣಾರ್ಥ ಚಟುವಟಿಕೆಗಳನ್ನು ಶಾಲೆಗಳು ಆಯೋಜಿಸಬೇಕು. ಈ ಆದೇಶವು ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುತ್ತದೆ” ಎಂದು ಹೇಳಿದೆ.

ಕ್ರಿಸ್‌ಮಸ್ ರಜೆ ರದ್ದುಗೊಳಿಸಿದ್ದನ್ನು ವಿಪಕ್ಷಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಟೀಕಿಸಿದ್ದಾರೆ. ಕ್ರಿಸ್‌ಮಸ್ ರಜೆ ರದ್ದತಿಯು ಕ್ರೈಸ್ತ ಸಮುದಾಯದ ಕಡೆಗಣನೆ. ಇದು ಸಾರ್ವಜನಿಕ ಶಿಕ್ಷಣದಲ್ಲಿನ ಜಾತ್ಯತೀತ ಸ್ವರೂಪವನ್ನು ದುರ್ಬಲಗೊಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...