ಉತ್ತರ ಪ್ರದೇಶ, ದೇಶದ ಪ್ರಗತಿಗೆ ರಾಯ್‌ಬರೇಲಿ ಮತ್ತೊಮ್ಮೆ ಹಾದಿ ತೋರಿಸಬೇಕು: ರಾಹುಲ್ ಗಾಂಧಿ

Date:

ಉತ್ತರ ಪ್ರದೇಶ ರಾಜ್ಯಕ್ಕೆ ರಾಯ್ ಬರೇಲಿಯು ಈ ಹಿಂದೆ ಸೈದ್ಧಾಂತಿಕ ಮತ್ತು ರಾಜಕೀಯ ಕೇಂದ್ರವಾಗಿತ್ತು. ಈಗ, ಮತ್ತೊಮ್ಮೆ ಕ್ಷೇತ್ರವು ದೇಶಕ್ಕೆ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

- Advertisement -

ಪ್ರಿಯಾಂಕಾ ಗಾಂಧಿ ಜೊತೆಗಿನ ಮಾತಕತೆಯ ವಿಡಿಯೋವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಅವರು ರಾಯ್‌ಬರೇಲಿಯಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ನೆನಪಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಭಾರತದ ಪ್ರಗತಿಯಲ್ಲಿ ರಾಯ್ ಬರೇಲಿ ಪ್ರಮುಖ ಪಾತ್ರ ಹೊಂದಿದೆ. ದೇಶಕ್ಕೆ ಮಾರ್ಗದರ್ಶನ ನೀಡುವಲ್ಲಿ ರಾಯ್ ಬರೇಲಿಯು ಹಲವು ವರ್ಷಗಳಿಂದ ಉತ್ತರ ಪ್ರದೇಶದ ರಾಜಕೀಯ ಮತ್ತು ಸೈದ್ಧಾಂತಿಕ ಕೇಂದ್ರವಾಗಿದೆ. ರಾಯ್ ಬರೇಲಿಯು ಸ್ವಾತಂತ್ರ್ಯ ಹೋರಾಟದ ಇತಿಹಾಸ ಹೊಂದಿದೆ” ಎಂದು ಹೇಳಿದ್ದಾರೆ.

“ಇಂದು, ರಾಯ್ ಬರೇಲಿಯ ಪಾತ್ರವು ಮೊದಲು ಉತ್ತರ ಪ್ರದೇಶದ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು. ನಂತರ ಉತ್ತರ ಪ್ರದೇಶವು ಮತ್ತೊಮ್ಮೆ ಭಾರತಕ್ಕೆ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು” ಎಂದು ಅವರು ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, “ನೀವು (ಬಿಜೆಪಿ) ರಾಜಕೀಯ ಮಾಡುವಾಗ, ನೀವು ನಿಮ್ಮ ಕುಟುಂಬವನ್ನು ಗೌರವಿಸದಿದ್ದರೆ, ಕುಟುಂಬದಲ್ಲಿ ನಿಮ್ಮ ಸಂಬಂಧಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ನೀವು ಕುಟುಂಬದ ಹೊರಗಿನ ಸಂಬಂಧಗಳನ್ನು ಸಹ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಅದೇ ರೀತಿ, ನಿಮ್ಮ ದೈನಂದಿನ ಜೀವನದಲ್ಲಿ ನೀವು ಸುಳ್ಳು ಹೇಳಿದರೆ, ನೀವು ರಾಜಕೀಯದಲ್ಲಿಯೂ ಸುಳ್ಳು ಹೇಳುತ್ತೀರಿ” ಎಂದಿದ್ದಾರೆ.

 

“ಜನರು ತಮ್ಮ ಮತವನ್ನು ಅಸ್ತ್ರವಾಗಿ ಬಳಸಿಕೊಂಡು ತಮ್ಮ ಜೀವನ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಮತ ಹಾಕಬೇಕು” ಎಂದು ಮತದಾರರಲ್ಲಿ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...