ಉತ್ತರಾಖಂಡ್ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

Date:

Advertisements

ಉತ್ತರಾಖಂಡ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಿನ್ನೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಡಿಸಿದ್ದ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆಯು ಇಂದು ಅಂಗೀಕಾರಗೊಂಡಿದೆ.

ಏಕರೂಪ ನಾಗರಿಕ ಸಂಹಿತೆಯನ್ನು ಅಂಗೀಕರಿಸುವಂತೆ ವಿಧಾನಸಭೆಯ ಸ್ಪೀಕರ್ ಆಗಿರುವ ಶ್ರೀಮತಿ ರಿತು ಖಂಡೂರಿ ಭೂಷಣ್ ಅವರಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದರು. ಈ ವೇಳೆ ಪರವಿರುವವರು ಹೌದು ಎಂದು ಓಗೊಡಬೇಕು, ವಿರೋಧವಿರುವವರು ‘ಇಲ್ಲ’ ಎಂದು ತಿಳಿಸುವಂತೆ ಸ್ಪೀಕರ್ ಹೇಳಿದರು.

ಆಡಳಿತ ಪಕ್ಷದ ಸದಸ್ಯರು ಓಗೊಟ್ಟರೆ, ಪ್ರತಿಪಕ್ಷಗಳ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆ ಬಳಿಕ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡ- 2024 ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಘೋಷಿಸಿದರು. ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆಯನ್ನು ಅಂಗೀಕರಿಸಿದ ಮೊದಲ ರಾಜ್ಯ ಉತ್ತರಾಖಂಡವಾಗಿದೆ.

Advertisements

ನಿನ್ನೆ ಸಂವಿಧಾನದ ಮೂಲ ಪ್ರತಿಯೊಂದಿಗೆ ಸದನಕ್ಕೆ ಆಗಮಿಸಿದ್ದ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಸೂದೆ ಮಂಡಿಸಿದ್ದರು. ಈ ವೇಳೆ ಸದನದಲ್ಲಿದ್ದ ಆಡಳಿತ ಪಕ್ಷದ ಶಾಸಕರು ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿದರೆ, ವಿಪಕ್ಷಗಳ ಸದಸ್ಯರು ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದರು.

ಇಂದು ಮಸೂದೆ ಅಂಗೀಕಾರಗೊಂಡ ಬಳಿಕ ಟ್ವೀಟ್ ಮಾಡಿರುವ ಸಿಎಂ ಪುಷ್ಕರ್ ಸಿಂಗ್ ಧಾಮಿ, “ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆ-2024 ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.. ಗಂಗಾಮಾತೆ ಮತ್ತು ಯಮುನೆಯ ಮೂಲಸ್ಥಾನವಾದ ಉತ್ತರಾಖಂಡದಿಂದ ಆರಂಭವಾಗಿರುವ ಈ ಏಕರೂಪ ನಾಗರಿಕ ಸಂಹಿತೆ ಸಮಾನತೆ ಮತ್ತು ಏಕರೂಪತೆ ಪ್ರತೀಕವಾಗಿ ದೇಶಕ್ಕೆ ಹಾದಿ ತೋರಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಏಕ್ ಭಾರತ್-ಶ್ರೇಷ್ಠ ಭಾರತ್’ ಎಂಬ ದೂರದೃಷ್ಟಿಗೆ ಅನುಗುಣವಾಗಿ ಇರಲಿದೆ” ಎಂದು ತಿಳಿಸಿದ್ದಾರೆ.

“ರಾಜ್ಯದ ಜನರ ಆಶೋತ್ತರಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಯುಸಿಸಿಯ ಕರಡನ್ನು ತಯಾರಿಸಿದ ಸಮಿತಿಯ ಎಲ್ಲ ಸದಸ್ಯರಿಗೆ ಮತ್ತು ಬೆಂಬಲ ನೀಡಿದ ದೇವಭೂಮಿಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆಗಳು” ಎಂದು ಸಿಎಂ ಧಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತ್ವತ್ವದ ಐವರು ಸದಸ್ಯರ ಸಮಿತಿ ಸಲ್ಲಿಸಿದ ಯುಸಿಸಿ ಕುರಿತ ಕರಡು ಸಮಿತಿ ವರದಿಯನ್ನು ಉತ್ತರಾಖಂಡ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದುಕೊಂಡಿತ್ತು.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ತರುವ ಉದ್ದೇಶದಿಂದಲೇ ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿತ್ತು. ಅಧಿವೇಶನದ ಎರಡನೇ ದಿನವಾದ ಮಂಗಳವಾರ ಈ ಮಸೂದೆಯನ್ನು ಮಂಡಿಸಲಾಗಿತ್ತು. ಫೆ.8ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X