ಶಾಲೆ, ಕಾಲೇಜುಗಳಲ್ಲಿ ‘ವಚನ ಸಂಸ್ಕೃತಿ ಅಭಿಯಾನ’: ಸಿಎಂ ಸಿದ್ದರಾಮಯ್ಯ ಘೋಷಣೆ

Date:

  • ವಚನ ಸಂಸ್ಕೃತಿ ಅಭಿಯಾನ ಆರಂಭಿಸುವಂತೆ ಮನವಿ ಮಾಡಿದ್ದ ನಿಜಗುಣಾನಂದ ಸ್ವಾಮೀಜಿ
  • ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ

ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಇಂತಹ ಆಶಯಗಳನ್ನೇ ಬಸವಣ್ಣನವರು, ಅಂಬೇಡ್ಕರ್ ಅವರು ತಿಳಿಸಿದರು. ನಿಜಗುಣಾನಂದ ಸ್ವಾಮೀಜಿ ಹೇಳಿದಂತೆ ‘ವಚನ ಸಂಸ್ಕೃತಿ ಅಭಿಯಾನ’ವನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ಭರವಸೆ ನೀಡಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕು. ವಚನಗಳು ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಅಗತ್ಯ. ಜಾತಿ ವ್ಯವಸ್ಥೆ ಕಾರಣಕ್ಕಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ. ಶತಮಾನಗಳಿಂದ ಶೂದ್ರರು ಹಾಗೂ ಮಹಿಳೆಯರು ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಸಮ ಸಮಾಜ ನಿರ್ಮಾಣವಾಗಬೇಕಾದರೆ ಅವಕಾಶವಂಚಿತರು, ದುರ್ಬಲರು ಮುಖ್ಯವಾಹಿನಿಗೆ ಬರಬೇಕು. ಅಂತಹ ಜನರನ್ನು ಗುರುತಿಸಿ, ಸಾಮಾಜಿಕ, ಆರ್ಥಿಕ ನ್ಯಾಯ ಕೊಡುವ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ” ಎಂದರು.

“1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು‌. ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು. ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಮಾಡಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷ ಕನ್ನಡ ನೆಲ, ಜಲ, ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನ್ನಡ ಭವನ ನಿರ್ಮಾಣ

“ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?

ಅರ್ಹತೆಯುಳ್ಳವರಿಗೆ ಪ್ರಶಸ್ತಿ 

“ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆ ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ‌. ಬಹುತೇಕವಾಗಿ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ” ಎಂದು ತಿಳಿಸಿದರು.

ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವ ಯೋಜನೆಗಳು

ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 86 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ‌ಇರುವವರಿಗೆ ಶಕ್ತಿ ಕೊಡುವುದಲ್ಲ, ಶಕ್ತಿ ಇಲ್ಲದವರಿಗೆ ಶಕ್ತಿ ತುಂಬಬೇಕೆನ್ನುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಎಂದರು.

ಸಮಾಜಸೇವೆಯ ಮೂಲಕ ಋಣ ತೀರಿಸಲು ಸಾಧ್ಯ

“ಪ್ರೀತಿ, ವಿಶ್ವಾಸ, ಮನುಷ್ಯತ್ವ ಬಹಳ ಮುಖ್ಯ. ಮನುಷ್ಯತ್ವ ಇಲ್ಲದಿದ್ದರೆ ಅದು ಸಮಾಜವೇ ಅಲ್ಲ. ನಾವೆಲ್ಲರೂ ಕೂಡ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ನಾವು ಹುಟ್ಟಿದ ಮೇಲೆ ಸಮಾಜದಿಂದ ಎಲ್ಲವನ್ನೂ ಪಡೆದಿದ್ದೇವೆ ಎಂದ ಮೇಲೆ, ಸಮಾಜದ ಪರ ಕೆಲಸ ಮಾಡುವ ಮೂಲಕ ಸಮಾಜದ ಋಣ ತೀರಿಸಲು ಸಾಧ್ಯ. ಇಂತಹ ಕೆಲಸವೇ ಸಮಾಜ ಸೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ ಮಕ್ಕಳಿಗೆ ಆರು ದಿನವೂ ಪೌಷ್ಟಿಕ ಆಹಾರ: ಸಿಎಂ ಸಿದ್ದರಾಮಯ್ಯ

"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ...

ರೇಣುಕಸ್ವಾಮಿ ಕೊಲೆ ಪ್ರಕರಣ | 4ನೇ ಆರೋಪಿ ತಾಯಿ ಅನಾರೋಗ್ಯದಿಂದ ಸಾವು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನೆಯ...

ಬೆಳಗಾವಿ | ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ; ಕೂದಲೆಳೆಯಲ್ಲಿ 11 ಮಂದಿ ಪಾರು

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ...