ವಾಲ್ಮೀಕಿ ನಿಗಮ ಹಗರಣ: ಇ.ಡಿ ವಶಕ್ಕೆ ಶಾಸಕ ನಾಗೇಂದ್ರ

Date:

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು.

- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇ.ಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ದಿನ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಶಾಸಕ ನಾಗೇಂದ್ರ ವಿರುದ್ಧ ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ನಾಗೇಂದ್ರ ಪಿಎ ಹರೀಶ್‌ಗೆ ತಲುಪಿತ್ತು ಎನ್ನಲಾಗಿದೆ. ಅಲ್ಲದೆ ಏಪ್ರಿಲ್ ತಿಂಗಳಿನ ಎರಡನೇ ವಾರ ಪದ್ಮನಾಭನಿಂದ ಹರೀಶ್‌ 25 ಲಕ್ಷ ರೂ. ಹಣ ಪಡೆದಿದ್ದನು. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.

ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ನಂತರ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...