ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಳ್ಳಲು ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದರು.

- Advertisement -

ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೊಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್​​ನಲ್ಲಿ ನಿರ್ಧಾರ ಮಾಡುತ್ತೇವೆ” ಎಂದು ಪರಮೇಶ್ವರ್ ಹೇಳಿದರು.

ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಬೇರೆ ಬೇರೆ ರೀತಿಯಲ್ಲಿ ಅಂದಾಜು ಮಾಡಿದ್ದೆವು. ಅದು ಏರುಪೇರು ಆಗಿದೆ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಎಫರ್ಟ್ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಮ್ಮ ಅಭ್ಯರ್ಥಿ ಸೋತಿದ್ದಾರೆ” ಎಂದು ತಿಳಿಸಿದರು.

“ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು” ಎಂದು ಹೇಳಿದರು.

“ಏಕ್ಸಿಟ್ ಪೋಲ್​​ಗಳಲ್ಲಿ ಫಲಿತಾಂಶ ಏಕಮುಖವಾಗಿದೆ ಎಂದು ಮಾಧ್ಯಮಗಳು ಬಿಂಬಿಸಿದ್ದವು. ಆದರೆ, ಫಲಿತಾಂಶ ಬೇರೆ ತರಹ ಬಂದಿದೆ. ಮೋದಿ 400 ಸ್ಥಾನ ಗೆಲ್ಲುತ್ತಾರೆ ಎಂಬ ನೀರಿಕ್ಷೆ ಸುಳ್ಳಾಗಿದೆ. ಇಂಡಿಯಾ ಒಕ್ಕೂಟ ಹೆಚ್ಚು ಸೀಟ್ ಗೆದ್ದಿದೆ. ವಿರೋಧ ಪಕ್ಷ ಗಟ್ಟಿಯಾಗಿ‌ ಉಳಿಯತ್ತೆ ಅಂತ ತೋರಿಸಿದ್ದಾರೆ. ಮೋದಿಗೆ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಬಿಜೆಪಿಗೆ ಬಹುಮತ ಬಂದಿಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...