ವಾಲ್ಮೀಕಿ ನಿಗಮ ಅಕ್ರಮ | ಸಿಎಂ ಸಿದ್ದರಾಮಯ್ಯರಿಂದ ಸ್ಪಷ್ಟೀಕರಣಕ್ಕೆ ಸಂಸದ ಬೊಮ್ಮಾಯಿ ಆಗ್ರಹ

Date:

ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು 40 ಕೋಟಿ ರೂ. ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ನಿಗಮದ ಹಗರಣದ ಆಳ‌ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯಾನೇ ಇಲ್ಲ ಅಂತ ಅನಿಸುತ್ತದೆ. ಈಗಾಗಲೇ ಹಲವಾರು ಅಕೌಂಟ್‌ಗಳನ್ನು ತೆರೆದು ಹೈದರಾಬಾದ್ ಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಅದು ಹಣಕಾಸು ಇಲಾಖೆಗೆ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಆದರೆ, ನಮಗೆ ಇತ್ತೀಚೆಗೆ ಒಂದು ಮಾಹಿತಿ ಬಂದಿದೆ. ಮಾರ್ಚ್ 31 ರಂದು ನೇರವಾಗಿಯೇ ರಾಜ್ಯ ಸರ್ಕಾರದ ಖಜಾನೆಯಿಂದ ಸುಮಾರು 40 ಕೋಟಿ ರೂ. ಅಧಿಕೃತ ಖಾತೆಗೆ ಹೋಗದೇ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಇದೆ. ಇದು ಹೇಗೆ ಹೊರಗೆ ಬಂದಿದೆ ಎಂದರೆ, ಪೇಮೆಂಟ್ ಮಾಡಿರುವ ಚಲನ್ ಅನ್ನು ಕಂಪ್ಯೂಟರದ ನಿಂದ ತೆಗೆದು ಹಾಕುವ ಪಯತ್ನವಾಗಿದೆ” ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳು ಈ ಬಗ್ಗೆ ವಿಧಾನಸಭೆಯಲ್ಲಿ ಸ್ಪಷ್ಟೀಕರಣ ನೀಡಬೇಕು. ಪಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ. ಮಾರ್ಚ್ 31 ಕೈ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ, ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೋವಿಂದ ಕಾರಜೋಳ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...