ವಾಲ್ಮೀಕಿ ನಿಗಮ ಅಕ್ರಮ | ದೂರು ದಾಖಲಿಸಿಕೊಂಡ ಸಿಬಿಐ, ಸಚಿವ ನಾಗೇಂದ್ರಗೆ ನೋಟಿಸ್ ನೀಡುವ ಸಾಧ್ಯತೆ

Date:

ಕ‌ರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

- Advertisement -

ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಸಚಿವ ನಾಗೇಂದ್ರಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸದ್ಯ ಎಸ್ಐಟಿಯಲ್ಲಿರುವ ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಹೆಚ್ಚಾಗಿದೆ. ಎಸ್ಐಟಿ ವರ್ಗಾವಣೆಗೆ ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಇದೇ ಪ್ರಕರಣದಲ್ಲಿ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ರಾಜ್ಯದ ಸಿಐಡಿಯ ಎಸ್‌ಐಟಿ ತಂಡ ಈಗಾಗಲೇ ಬಂಧಿಸಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಯೂನಿಯನ್ ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಯೂನಿಯನ್‌ ಬ್ಯಾಂಕ್‌ನಲ್ಲಿರುವ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ಈ ವಂಚನೆಯ ಜಾಡು ಬೆನ್ನತ್ತಿದಾಗ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ವಾಲ್ಮೀಕಿ ನಿಗಮದ 94.73 ಕೋಟಿ ರೂ. ಹಣವನ್ನು ದೋಚುವಲ್ಲಿ ಸತ್ಯನಾರಾಯಣ ಪ್ರಮುಖ ಆರೋಪಿಯಾಗಿದ್ದಾನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...