ವಾಲ್ಮೀಕಿ ನಿಗಮ ಅಕ್ರಮ | ‘ಆತ್ಮಸಾಕ್ಷಿ’ ಇದ್ದವರು ಸಿಎಂ ಸ್ಥಾನದಲ್ಲಿ ಮುಂದುವರಿಯಲ್ಲ: ಆರ್‌ ಅಶೋಕ್

Date:

ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ದಲಿತರಿಗೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದಲ್ಲಿ ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

“ನಿಗಮದ ಹಣವನ್ನ ಮಾಜಿ ಸಚಿವ ಬಿ ನಾಗೇಂದ್ರ ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ” ಎಂದು ಜಾರಿ ನಿರ್ದೇಶನಾಲಯದ ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...