ವಾಲ್ಮೀಕಿ ನಿಗಮ ಅಕ್ರಮ | ನಕಲಿ ಖಾತೆಗಳಿಂದ ಬಾರ್​, ಚಿನ್ನದಂಗಡಿ ಖಾತೆಗಳಿಗೆ ಹಣ ವರ್ಗಾವಣೆ

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಮೊತ್ತ ಮದ್ಯದಂಗಡಿಗಳು, ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ತನಿಖೆಯಲ್ಲಿ ಬಯಲಾಗಿದೆ.

- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ 94.73 ಕೋಟಿ ರೂ. ಅಕ್ರಮವಾಗಿ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದೆ. ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಬಂಧಿಸಿ ಬುಧವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಈ ಮಾಹಿತಿ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸತ್ಯನಾರಾಯಣ ವರ್ಮಾ ಸಂಬಂಧಿಕರ ಮನೆಯಲ್ಲಿ 8.21 ಕೋಟಿ ರೂ. ಪತ್ತೆಯಾಗಿದೆ. ಹಣವನ್ನು 4 ಸೂಟ್ ಕೇಸ್‌ಗಳಲ್ಲಿ ತುಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಆರೋಪಿಯ ಸಂಬಂಧಿಕರ ಮನೆಗಳಿಗೆ ತೆರಳಿ ಹಣವನ್ನು ಜಪ್ತಿ ಮಾಡಿದ್ದಾರೆ.

ವಂಚಕ ಸತ್ಯನಾರಾಯಣ ವರ್ಮಾ ಓಡಾಡುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನೂ ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಎಸ್​​ಐಟಿ ಅಧಿಕಾರಿಗಳು 94.73 ಕೋಟಿ ಹಣದಲ್ಲಿ ಸುಮಾರು 11.83 ಕೋಟಿ ರೂ, ನಗದು ಜಪ್ತಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...