ವಾಲ್ಮೀಕಿ ನಿಗಮ ಅಕ್ರಮ | ಅಮಾನತುಗೊಂಡ ಇಬ್ಬರು ಅಧಿಕಾರಿಗಳು ಎಸ್‌ಐಟಿ ವಶಕ್ಕೆ

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ರೂ. ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

Advertisements

ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗುತ್ತಿದ್ದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಸರ್ಕಾರ ಅಮನಾತ್ತು ಮಾಡಿತ್ತು. ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ನಿಗಮದ ಅಧಿಕಾರಿಗಳು ನೀಡಿರುವ ದೂರನ್ನು ಆಧರಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಇತ್ತ ಎಸ್​ಐಟಿ ನಡೆಸುತ್ತಿದೆ. ಅತ್ತ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಡ

ಬಿಜೆಪಿ ಸರ್ಕಾರದಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರು ಪ್ರತಿಭಟಿಸಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್​ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯಲ್ಲೇ ಬಿಜೆಪಿ ನಾಯಕರು ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್​ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X