ವಾಲ್ಮೀಕಿ ನಿಗಮ ಅಕ್ರಮ | ನಾವಾಗಿಯೇ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು‌.

ಸದಾಶಿವನಗರದಲ್ಲಿ ಸುದ್ದಿಗಾರರು ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ ನಡೆದಿದೆಯೋ, ಏನಾಗಿದೆ ಎಂಬುದು ಸಿಐಡಿ ತನಿಖೆಯಿಂದ ಗೊತ್ತಾಗಲಿದೆ. ನೂರು ಕೋಟಿ ರೂ. ಮೇಲು ಅಕ್ರಮವಾಗಿದ್ದರೆ ಮುಂದೆ ಏನು ಆಗುತ್ತದೆ ಎಂಬುದನ್ನು ನೋಡೋಣ. ನಾವಾಗಿಯೇ ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಾವು ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ. ಅಂತಹ ಸಂದರ್ಭ ಬಂದಾಗ ಸಿಎಂ ಜೊತೆ ಚರ್ಚೆ ಮಾಡಲೇ ಬೇಕಾಗುತ್ತದೆ. ಪ್ರತಿಭಟನೆ ಮಾಡುವುದು ವಿಪಕ್ಷದವರ ಹಕ್ಕು, ಮಾಡಲಿ. ಸರ್ಕಾರದಲ್ಲಿ ನಮಗೆ ಆದಂತಹ ಜವಾಬ್ದಾರಿಗಳಿವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದರು‌.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಜ್ವಲ್ ರೇವಣ್ಣ ಬಂಧನದ ನಂತರ ಪ್ರಕರಣದ ಕುರಿತು ಅಧಿಕಾರಿಗಳ ಜೊತೆ ಯಾವುದೇ ರೀತಿಯ ಚರ್ಚೆ ಮಾಡಿಲ್ಲ. ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ನಿನ್ನೆ ಶಿವಮೊಗ್ಗಕ್ಕೆ ಹೋಗಿದ್ದೆ. ತಡವಾಗಿ ಬಂದ ಹಿನ್ನೆಲೆಯಲ್ಲಿ ಚರ್ಚಿಸಲು ಸಾಧ್ಯವಾಗಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಎಸ್ಐಟಿ ನೋಡಿಕೊಳ್ಳುತ್ತದೆ‌” ಎಂದು ತಿಳಿಸಿದರು.

ಪ್ರಜ್ವಲ್ ಬಂಧನವಾಗಲು ತಡವಾಗಿದ್ದರಿಂದ ಸಾಕಷ್ಟು ಸಂತ್ರಸ್ತೆಯರು ದೂರು ಕೊಡಲು ಮುಂದೆ ಬಂದಿರಲಿಲ್ಲ. ಈಗ ಪ್ರಜ್ವಲ್ ಬಂಧನವಾಗಿದೆ. ಸಂತ್ರಸ್ತೆಯರಲ್ಲಿ ಏನಾದರು ಮನವಿ ಮಾಡುತ್ತೀರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾರಿಗೆ ತೊಂದರೆ ಆಗಿದೆ ಅವರು ಪೊಲೀಸರ ಮುಂದೆ ಬಂದು ದೂರು ಕೊಡಬಹುದು. ಎಸ್ಐಟಿ ಮುಂದೆ ಹೇಳಬಹುದು ಎಂದು ಮೊದಲೇ ತಿಳಿಸಲಾಗಿದೆ. ಅಂತವರಿಗೆ ಎಲ್ಲ ರೀತಿಯ ರಕ್ಷಣೆ ಕೊಡುತ್ತೇವೆ ಎಂಬುದನ್ನು ಹೇಳಿದ್ದೇವೆ. ಸಂತ್ರಸ್ತೆಯರಿಗಾಗಿ ತೆರೆಯಲಾದ ಸಹಾಯವಾಣಿ ವಿಚಾರದ ಕುರಿತು ಹೆಚ್ಚು ತಿಳಿದುಕೊಳ್ಳಲು ಹೋಗಿಲ್ಲ. ಕೆಲವು ವಿಚಾರವನ್ನು ಎಸ್ಐಟಿಯವರು ಗೌಪ್ಯವಾಗಿ ಇಟ್ಟುಕೊಳ್ಳುತ್ತಾರೆ. ಅಂತಹ ವಿಚಾರಗಳ ಬಗ್ಗೆ ಹೆಚ್ಚಿಗೆ ತಿಳಿದುಕೊಳ್ಳುವುದಿಲ್ಲ ಹೋಗಲ್ಲ” ಎಂದು ಹೇಳಿದರು.

ಪ್ರಜ್ವಲ್ ಬಂಧನ ಪ್ರಕ್ರಿಯೆ ವಿಳಂಬದ ಕುರಿತು ಪ್ರತಿಕ್ರಿಯಿಸಿ, “ಪ್ರಜ್ವಲ್ ನಮ್ಮ ದೇಶದಲ್ಲಿ ಅಥವಾ ಯಾವುದಾದರೂ ರಾಜ್ಯದಲ್ಲಿದ್ದರೆ ನಮ್ಮ ತಂಡವನ್ನು ಕಳುಹಿಸಿ ಕರೆದುಕೊಂಡು ಬರಬಹುದಿತ್ತು. ಹೊರ ದೇಶದಲ್ಲಿದ್ದ ಕಾರಣಕ್ಕಾಗಿ, ಬಂಧಿಸಲು ಅದಕ್ಕೆ ಆದಂತಹ ಪ್ರಕ್ರಿಯೆಗಳಿವೆ. ಇಲ್ಲಿಂದ ನಾಲ್ಕು ಜನ ಇನ್ಸ್‌ಪೆಕ್ಟರ್‌ಗಳನ್ನು ಅಥವಾ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಎತ್ತಾಕಿಕೊಂಡು ಬನ್ನಿ ಅಂತ ಹೇಳೋಕೆ ಆಗಲ್ಲ. ನಮ್ಮ ದೇಶಕ್ಕೂ ಬೇರೆ ದೇಶಕ್ಕೂ ರಾಜತಾಂತ್ರಿಕ ಒಪ್ಪಂದಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಅದನ್ನೆಲ್ಲ ಪಾಲಿಸಬೇಕಾಗುತ್ತದೆ. ಸಿಬಿಐ ಮೂಲಕ ಇಂಟರ್‌ಪೋಲ್‌ನವರಿಗೆ ನೋಟಿಸ್ ಕಳುಹಿಸಿ, ಅಲ್ಲಿಂದ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನು ಮಾಡಲಾಗಿತ್ತು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ಕೋರ್ಟ್‌ ಸ್ಥಾಪನೆಯಲ್ಲಿ ವಿಳಂಬ; ಹೈಕೋರ್ಟ್‌ ಅಸಮಾಧಾನ

ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ...

ವಾಲ್ಮೀಕಿ ನಿಗಮ ಅಕ್ರಮ | ಇ.ಡಿ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ರಾಜ್ಯ ಸರ್ಕಾರ, ಗಾಂಧಿ ಪ್ರತಿಮೆ ಬಳಿ ಧರಣಿ

ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ...