ವಿವಿಧ ರೀತಿಯ ಪಿಂಚಣಿ ಪಡೆಯುವವರಿಗೂ ಗೃಹಲಕ್ಷ್ಮಿ ಸಿಗಲಿದೆ: ಸಚಿವ ಕೃಷ್ಣ ಭೈರೇಗೌಡ

Date:

  • ಗೃಹಲಕ್ಷ್ಮಿ ಯೋಜನೆ ಅನುಮಾನಗಳಿಗೆ ಸ್ಪಷ್ಟನೆ ನೀಡಿದ ಕಂದಾಯ ಸಚಿವ
  • ಗೃಹ ಲಕ್ಷ್ಮಿ ಯೋಜನೆ 1.30 ಕೋಟಿ ಅರ್ಜಿಗಳು ಬರುವ ನಿರೀಕ್ಷೆ ಮಾಡಲಾಗಿದೆ

ಎಲ್ಲ ರೀತಿಯ ಪಿಂಚಣಿ ಪಡೆಯುವ ಮಹಿಳೆಯರಿಗೂ ಗೃಹಲಕ್ಷ್ಮಿಯೋಜನೆ ಲಾಭ ಸಿಗಲಿದೆ. ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಅನಗತ್ಯ ಗೊಂದಲ ಬೇಡ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದರು.

ಇಲಾಖೆ ಕಾರ್ಯವೈಖರಿ ಕುರಿತಂತೆ ಮಾತನಾಡಿದ ಅವರು, ಕಂದಾಯ ಇಲಾಖೆ ಅಡಿ ಬರುವ ಪಿಂಚಣಿ ಕಾರ್ಯಕ್ರಮಗಳ ಪರಿಶೀಲನೆ ಸಭೆ ನಡೆಸಲಾಗಿದೆ. 78 ಲಕ್ಷ ನಾನಾ ರೀತಿಯ ಜನರಿಗೆ, ಇಲಾಖೆ ವತಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ. ಇದಕ್ಕೆ 10,411 ಕೋಟಿ ಈ ವರ್ಷ ಖರ್ಚಾಗುತ್ತಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂದುವರೆದು ಮಾತನಾಡಿದ ಅವರು, ಬೇರೆ ಪಿಂಚಣಿ ಪಡೆಯುತ್ತಿರುವವರಿಗೂ ಗೃಹಲಕ್ಷ್ಮಿ ಯೋಜನೆ ದೊರಕಲಿದೆ. ಅವರ ಪಿಂಚಣಿ ಮೊಟಕು ಮಾಡಲಾಗುವುದಿಲ್ಲ, ಅವರಿಗೆ ಹೆಚ್ಚುವರಿಯಾಗಿ ಎರಡು ಸಾವಿರ ನೀಡಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್ : ಎಚ್‌ಡಿಕೆ ಆರೋಪ

ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ಅನುಷ್ಠಾನದ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಗೆ ನೀಡಲಾಗಿದೆ. ಇದಕ್ಕೆ ಇಲಾಖೆಗೆ ಸಹಕಾರ ನೀಡಲಾಗುವುದು ಎಂದ ಸಚಿವರು,ಯೋಜನೆಗೆ 1.30 ಕೋಟಿ ಅರ್ಜಿ ಬರಬಹುದೆನ್ನುವ ನಿರೀಕ್ಷೆ ಇದೆ ಎಂದು ಹೇಳಿದರು.

ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೂಹಂಚಿಕೆ ಅಕ್ರಮ ನಡೆದಿದೆ ಎನ್ನುವ ದೂರು ಬಂದಿದೆ ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಯಾರಿಗೆಲ್ಲ ಸರ್ಕಾರಿ ಭೂಮಿ ಹಂಚಿಕೆ, ಮಂಜೂರಾಗಿದೆ ಎನ್ನುವುದನ್ನು ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...