ಜಿ ರಾಮ್ ಜಿ | ₹95,692 ಕೋಟಿ ಹಂಚಿಕೆ; ಕೇವಲ 52 ದಿನಕ್ಕೆ ಸಾಕು: ತಜ್ಞರು

Date:

20 ವರ್ಷ ಹಳೆಯದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ಜಾರಿಗೆ ಬಂದಿರುವ 2025ರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಗೆ ಕೇಂದ್ರ ಬಜೆಟ್‌ನಲ್ಲಿ 95,692.31 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಈ ಹಣವು ಬರೀ 52 ದಿನಕ್ಕೆ ಸಾಕಾಗುತ್ತದೆ, 125 ದಿನಗಳಿಗೆ ಈ ಹಣ ಸಾಲದು ಎಂದು ತಜ್ಞರು ಹೇಳಿದ್ದಾರೆ.

- Advertisement -

ಲಿಬ್‌ಟೆಕ್‌ನ ತಜ್ಞ ಚಕ್ರಧರ್ ಬುದ್ಧ, “ಕೇಂದ್ರ ಸರ್ಕಾರವು 125 ದಿನಗಳ ಉದ್ಯೋಗದ ಭರವಸೆ ನೀಡಿ ಮನರೇಗಾಕ್ಕಿಂತ ವಿಬಿ-ಜಿ ರಾಮ್ ಜಿ ಸುಧಾರಿತ ಯೋಜನೆ ಎಂದು ಬಿಂಬಿಸುತ್ತದೆ. ಆದರೆ ಬಜೆಟ್ ವಿಭಿನ್ನವಾದ ಕಥೆಯನ್ನು ಹೇಳಿದೆ. ಪ್ರಸ್ತುತ ಮಾನದಂಡಗಳ ಪ್ರಕಾರ, ಎಲ್ಲಾ ಸಕ್ರಿಯ ಕುಟುಂಬಗಳಿಗೆ ಉದ್ಯೋಗ ಒದಗಿಸಲು ಕನಿಷ್ಠ 2.3 ಲಕ್ಷ ಕೋಟಿ ರೂ.ಗಳಷ್ಟು ಹಣವನ್ನು ಕೇಂದ್ರ ಹಂಚಿಕೆ ಮಾಡುವ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್‌ 2026 | ಕರ್ನಾಟಕಕ್ಕೆ ಸಿಕ್ಕಿದ್ದು ಒಂದು ‘ಹೈಸ್ಪೀಡ್ ರೈಲು’ ಮಾತ್ರ!

“ಕೇಂದ್ರ ಬರೀ 95,692 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಇದೂ ರಾಜ್ಯಗಳು ತಮ್ಮ ಶೇಕಡ 40ರಷ್ಟು ಪಾಲನ್ನು ನೀಡುವುದರ ಮೇಲೆ ಅವಲಂಬಿಸಿರುತ್ತದೆ. ಇದು ಸುಮಾರು 64,000 ಕೋಟಿ ರೂ.ಗಳಷ್ಟಾಗುತ್ತದೆ. ಇಷ್ಟು ಕಡಿಮೆ ಹಣದಲ್ಲಿ ಯೋಜನೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ಲಿಬ್‌ಟೆಕ್ ಇಂಡಿಯಾದ ಸಂಶೋಧಕ ರಾಜೇಂದ್ರನ್ ನಾರಾಯಣನ್ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಹಂಚಿಕೆಯು ರಾಜ್ಯ ಬಜೆಟ್‌ ಸಿದ್ಧತೆಗೆ ಸ್ಪಷ್ಟತೆ ನೀಡುವ ಬದಲಿಗೆ ಗೊಂದಲವನ್ನು ಉಂಟು ಮಾಡಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...