ತಮಿಳುನಾಡು | ಟಿವಿಕೆಗೆ ಬೆಂಬಲ ಘೋಷಿಸಿದ ವಿಸಿಕೆ: ಬಹುಮತ ಪಡೆದ ಜೋಸೆಫ್ ವಿಜಯ್

Date:

ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿದ್ದು, ಕೊನೆಗೂ ನಟ ಜೋಸೆಫ್ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ವಿದುತಲೈ ಚಿರುತೈಗಳ ಕಚ್ಚಿ (ವಿಸಿಕೆ) ಬೆಂಬಲ ಘೋಷಿಸಿದೆ. ಬೆಂಬಲ ನೀಡುವುದಾಗಿ ಘೋಷಿಸಿದ ಪತ್ರವನ್ನು ಟಿವಿಕೆಗೆ ನೀಡಿದೆ.

- Advertisement -

ವಿಸಿಕೆಯ ತೋಲ್ ತಿರುಮಾವಲವನ್ ಅವರು ಸಿ. ಜೋಸೆಫ್ ವಿಜಯ್ ಅವರ ಟಿವಿಕೆಗೆ ತಮ್ಮ ಬೆಂಬಲವನ್ನು ದೃಢಪಡಿಸಿದ್ದಾರೆ ಮತ್ತು ಬೆಂಬಲ ಪತ್ರವನ್ನು ನೀಡಿದ್ದಾರೆ ಎಂದು ಟಿವಿಕೆ ನಾಯಕ ಆಧವ್ ಅರ್ಜುನ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಆರಂಭದಲ್ಲಿ 108 ಸ್ಥಾನಗಳನ್ನು ಗೆದ್ದಿದ್ದ ಟಿವಿಕೆಗೆ ಸರ್ಕಾರ ರಚಿಸಲು 118 ಶಾಸಕರ ಬೆಂಬಲದ ಅಗತ್ಯವಿತ್ತು. ಕಾಂಗ್ರೆಸ್, ಸಿಪಿಐ, ಸಿಪಿಎಂ ಹಾಗೂ ವಿಸಿಕೆ ಪಕ್ಷಗಳ ಬೆಂಬಲದೊಂದಿಗೆ ಟಿವಿಕೆ ಈಗ ಈ ಮ್ಯಾಜಿಕ್ ಸಂಖ್ಯೆಯನ್ನು ತಲುಪಿದೆ.

ಇದನ್ನು ಓದಿದ್ದೀರಾ? ಅಹಂಕಾರದ ಪರಮಾವಧಿ: ವಾಟ್ಸ್‌ಆ್ಯಪ್‌ನಲ್ಲಿ ಬೆಂಬಲ ಕೇಳಿದ ವಿಜಯ್‌ಗೆ ವಿಸಿಕೆ ತರಾಟೆ

Advertisements

ವಿಸಿಕೆ ತನ್ನ ಬೆಂಬಲಕ್ಕೆ ಪ್ರತಿಯಾಗಿ ದೊಡ್ಡ ಬೇಡಿಕೆಯನ್ನು ಇಟ್ಟಿದೆ. ಪಕ್ಷದ ನಾಯಕ ತೋಲ್ ತಿರುಮಾವಳವನ್ ಅವರಿಗೆ ಉಪ ಮುಖ್ಯಮಂತ್ರಿ (DCM) ಹುದ್ದೆ ನೀಡಬೇಕು ಎಂದು ವಿಸಿಕೆ ಒತ್ತಾಯಿಸಿದೆ.

letter 2

ಈಗಾಗಲೇ ಎಡಪಕ್ಷಗಳಾದ ಸಿಪಿಐ ಮತ್ತು ಸಿಪಿಎಂ ಟಿವಿಕೆಗೆ ಬೇಷರತ್ ಬೆಂಬಲ ನೀಡಿವೆ. ಕಾಂಗ್ರೆಸ್ ಕೂಡ ಈ ಹಿಂದೆಯೇ ಬೆಂಬಲ ಸೂಚಿಸಿತ್ತು.

ಟಿವಿಕೆ: 108
ಕಾಂಗ್ರೆಸ್: 5
ಸಿಪಿಐ: 2
ಸಿಪಿಐಎಂ: 2
ವಿಸಿಕೆ: 2
ಒಟ್ಟು ಟಿವಿಕೆ ಮೈತ್ರಿಕೂಟ: 119 (ವಿಜಯ್ ಗೆದ್ದ ಎರಡು ಕ್ಷೇತ್ರಗಳು ಸೇರಿ)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...