ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

Date:

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ನೀಡಿದ ದೇಣಿಗೆಗಳು ನಾಲ್ಕು ಪಟ್ಟು ಹೆಚ್ಚಾಗಿದೆ. ಮಾರ್ಚ್ 2025ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ವೇದಾಂತ ಬಿಜೆಪಿಗೆ 97 ಕೋಟಿ ರೂ.ಗಳನ್ನು ನೀಡಿದೆ ಎಂದು ಅದರ ಇತ್ತೀಚಿನ ವಾರ್ಷಿಕ ವರದಿ ತಿಳಿಸಿದೆ.

- Advertisement -

ವೇದಾಂತವು ತನ್ನ ಪೋಷಕ ಸಂಸ್ಥೆಯಾದ ಲಂಡನ್‌ನ ವೇದಾಂತ ರಿಸೋರ್ಸಸ್ ಪಿಎಲ್‌ಸಿಗೆ ‘ವಿವಿಧ ವೆಚ್ಚಗಳು’ ಅಡಿಯಲ್ಲಿ ನೀಡಿದ ರಾಜಕೀಯ ದೇಣಿಗೆಗಳು ಮತ್ತು ನಿರ್ವಹಣೆ ಮತ್ತು ಬ್ರಾಂಡ್ ಶುಲ್ಕದ ವೆಚ್ಚಗಳನ್ನು ತನ್ನ ವಾರ್ಷಿಕ ವರದಿಯಲ್ಲಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ರಾಜಕೀಯ ದೇಣಿಗೆಗಳು 2024-25ರಲ್ಲಿ ಒಟ್ಟು 157 ಕೋಟಿ ರೂ.ಗಳಾಗಿದ್ದು, ಹಿಂದಿನ ಹಣಕಾಸು ವರ್ಷದಲ್ಲಿ ಇದು 97 ಕೋಟಿ ರೂ.ಗಳಷ್ಟಿತ್ತು. ಬಿಜೆಪಿಗೆ ನೀಡಿದ ದೇಣಿಗೆ ಗಗನಕ್ಕೇರಿದರೆ, ವಿರೋಧ ಪಕ್ಷ ಕಾಂಗ್ರೆಸ್‌ಗೆ ನೀಡಿದ ದೇಣಿಗೆ ಕೇವಲ ಹತ್ತು ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ ಎಂದು ವರದಿಯಾಗಿದೆ.

ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ನೀಡಿದೆ?

2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ವರೆಗಿನ ಹಣಕಾಸು ವರ್ಷ 2025ರಲ್ಲಿ ವೇದಾಂತ ದೇಣಿಗೆಯಾಗಿ ಬಿಜೆಪಿಗೆ 97 ಕೋಟಿ ರೂಪಾಯಿ, ಬಿಜು ಜನತಾ ದಳಕ್ಕೆ 25 ಕೋಟಿ ರೂಪಾಯಿ, ಜಾರ್ಖಂಡ್ ಮುಕ್ತಿ ಮೋರ್ಚಾ 20 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 10 ಕೋಟಿ ರೂಪಾಯಿ ನೀಡಿದೆ ಎಂದು 2024-25ರ ವಾರ್ಷಿಕ ವರದಿ ಹೇಳುತ್ತದೆ.

2024 ಮಾರ್ಚ್‌ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಬಿಜೆಪಿಗೆ 26 ಕೋಟಿ ರೂಪಾಯಿ, ಬಿಜು ಜನತಾ ದಳಕ್ಕೆ 15 ಕೋಟಿ ರೂಪಾಯಿ, ಜಾರ್ಖಂಡ್ ಮುಕ್ತಿ ಮೋರ್ಚಾಕ್ಕೆ 5 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 49 ಕೋಟಿ ರೂಪಾಯಿ ವೇದಾಂತ ನೀಡಿತ್ತು.

ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಸಂಸ್ಥೆಗಳಲ್ಲಿ ವೇದಾಂತವು ಒಂದಾಗಿದೆ. 2022-23ರಲ್ಲಿ ಇದು ರಾಜಕೀಯ ಪಕ್ಷಗಳಿಗೆ ಒಟ್ಟು 155 ಕೋಟಿ ರೂ.ಗಳನ್ನು ಮತ್ತು 2021-22ರಲ್ಲಿ 123 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿತ್ತು.

ಇದೀಗ ಚುನಾವಣಾ ಬಾಂಡ್ ಆರಂಭದಿಂದ ರದ್ದಾದವರೆಗಿನ ವೇದಾಂತದ ದೇಣಿಗೆಯನ್ನೂ ಬಹಿರಂಗಪಡಿಸಲಾಗಿದೆ. 2017ರಿಂದ ಪ್ರಾರಂಭವಾದ ಐದು ವರ್ಷಗಳಲ್ಲಿ ರಾಜಕೀಯ ಪಕ್ಷಗಳಿಗೆ ವೇದಾಂತ 457 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...