ಹಿರಿಯ ಬಿಜೆಪಿ ನಾಯಕ ಪ್ರೊ. ಆಶಿಮ್ ಕುಮಾರ್ ಘೋಷ್ ಹರಿಯಾಣ ರಾಜ್ಯಪಾಲರಾಗಿ ನೇಮಕ

Date:

ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ 81 ವರ್ಷದ ಪ್ರೊಫೆಸರ್ ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಎರಡು ದಶಕಗಳ ಹಿಂದೆಯೇ ಆಶಿಮ್ ಕುಮಾರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

- Advertisement -

ಬಿಜೆಪಿಯ ಹಿರಿಯ ನಾಯಕರಿಗೆ ರಾಜ್ಯಪಾಲರ ಹುದ್ದೆ ನೀಡಿರುವುದು ಬಿಜೆಪಿಯವರಿಗೂ ಸೇರಿ ಹಲವು ಮಂದಿಗೆ ಅಚ್ಚರಿ ಮೂಡಿಸಿದೆ. ಬಿಜೆಪಿಯ ಹಿರಿಯ ನಾಯಕ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಮಾಜಿ ರಾಜ್ಯ ಸಚಿವ ಬಂಡಾರು ದತ್ತಾತ್ರೇಯ ಅವರ ಸ್ಥಾನವನ್ನು ಘೋಷ್ ತುಂಬಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇದನ್ನು ಓದಿದ್ದೀರಾ? ಕರ್ನಾಟಕ 50 | ಒಕ್ಕೂಟ ವ್ಯವಸ್ಥೆಗೆ ಮಾರಕವಾದ ರಾಜ್ಯಪಾಲರ ರಾಜಕಾರಣ

ಉತ್ತರ ಕೋಲ್ಕತ್ತಾದ ಶ್ರೀ ಶಿಕ್ಷಾಯತನ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದ ಆಶಿಮ್ ಕುಮಾರ್ ಅವರು 1991ರಲ್ಲಿ ಹಿರಿಯ ನಾಯಕ ಪ್ರಭಾಕರ್ ತಿವಾರಿ ಅವರ ಮಾರ್ಗದರ್ಶನದಲ್ಲಿ ಬಿಜೆಪಿಗೆ ಸೇರಿದರು. ಅದೇ ವರ್ಷ ಕಾಶಿಪುರ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸಿ ಸೋತರು.

1996ರಲ್ಲಿ ಅವರನ್ನು ಬಿಜೆಪಿಯ ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಎರಡು ವರ್ಷಗಳಲ್ಲಿ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಬಡ್ತಿ ನೀಡಲಾಯಿತು. 1999ರಲ್ಲಿ, ಕೇಂದ್ರ ಸಚಿವ ತಪನ್ ಸಿಕ್ದರ್ ಅವರು ರಾಜ್ಯಾಧ್ಯಕ್ಷ ಹುದ್ದೆಯನ್ನು ತ್ಯಜಿಸಿದ ನಂತರ ಘೋಷ್ ಅವರನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2002ರವರೆಗೆ ಆ ಹುದ್ದೆಯಲ್ಲಿಯೇ ಇದ್ದರು.

2000ದಲ್ಲಿ ನಡೆದ ಚುನಾವಣೆಯಲ್ಲಿ, ಘೋಷ್ ಹಿರಿಯ ನಾಯಕ ಸುಕುಮಾರ್ ಬಂಡೋಪಾಧ್ಯಾಯ ಅವರನ್ನು ಕೇವಲ 34 ಮತಗಳಿಂದ ಸೋಲಿಸಿದರು. ರಾಜ್ಯಾಧ್ಯಕ್ಷರಾಗಿ ಅವಧಿ ಮುಗಿದ ನಂತರ ಕ್ರಮೇಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದರು. ಆದರೆ ಕೆಲವು ತಿಂಗಳುಗಳಿಂದ ಮತ್ತೆ ಬಿಜೆಪಿ ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಿದ್ದಾರೆ.

ಇನ್ನು ಇದೇ ವೇಳೆ ರಾಷ್ಟ್ರಪತಿಗಳು, ಲಡಾಖ್‌ಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಹಾಗೂ ಗೋವಾ ರಾಜ್ಯಕ್ಕೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಗೋವಾ ರಾಜ್ಯಪಾಲರಾಗಿ ಪುಸಪತಿ ಅಶೋಕ್ ಗಜಪತಿ ರಾಜು ನೇಮಕ ಮಾಡಲಾಗಿದೆ. ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಆಗಿ ಕವಿಂದರ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...