ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತನ ಅಪಹರಣ

Date:

ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿರುವ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಈ ಬಗ್ಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೆನ್ನಲ್ಲೇ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಮ್ಬೆಮ್ ಎಂಬವರನ್ನು ಅಪಹರಣ ಮಾಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಭಾನುವಾರ ಸಿಎಂ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಮಣಿಪುರದಲ್ಲಾದ ರಾಜಕೀಯ ಬೆಳವಣಿಗೆ ಬಗ್ಗೆ ಪತ್ರಕರ್ತ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದರು. ಬಳಿಕ ಮನೆಗೆ ತೆರಳಿದ್ದರು. ಈ ವೇಳೆ ಅಪಹರಣ ನಡೆದಿದೆ ಎಂದು ಲಾಬಾ ಸಹೋದರ, ನಿವೃತ್ತ ಸೇನಾ ಮೇಜರ್ ಯಮ್ಬೆಮ್ ಅಂಗಾಂಬ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಅಧಿವೇಶನ ಕರೆಯದೆ ಸಂವಿಧಾನದ ನೀತಿಯ ಉಲ್ಲಂಘನೆ; ರಾಜ್ಯಪಾಲರ ವಿರುದ್ದ ಕಾಂಗ್ರೆಸ್‌ ಟೀಕೆ

ರಾಷ್ಟ್ರೀಯ ದೈನಂದಿನ ಮಾಧ್ಯಮ ಸ್ಟೇಟ್ಸ್‌ಮ್ಯಾನ್‌ನಲ್ಲಿ ವಿಶೇಷ ವರದಿಗಾರರಾಗಿ 69 ವರ್ಷದ ಲಾಬಾ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಜಾನೆ ಸುಮಾರು ಶಸ್ತ್ರಸಜ್ಜಿತ 15-20 ಜನರು ಅಪಹರಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಯಾವ ಸ್ಥಳದಲ್ಲಿ ಅಪಹರಣ ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಎರಡು ದಿನಗಳ ಹಿಂದಷ್ಟೇ ಲಾಬಾ ಯಮ್ಬೆಮ್ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಣಿಪುರದಲ್ಲಿ ಶಸ್ತ್ರಾಸ್ತ್ರ ಗುಂಪಿನ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಡಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಆಗ್ರಹಿಸಿದ್ದರು. ಇದಾದ ಬಳಿಕ ಪೊಲೀಸರು ಅಪರಿಚಿತ ದಾಳಿಕೋರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು?

“ಅಪಹರಣ ಮಾಡಿದವರು ಲಾಬಾ ಮಣಿಪುರ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದರಿಂದ ಸಿಟ್ಟುಗೊಂಡಿರಬಹುದು. ಆದರೆ ಪತ್ರಕರ್ತರಿಗೆ ಸಮಾಜದಲ್ಲಿ ಏನು ನಡೆಯುತ್ತಿದೆಯೋ ಅದರ ಬಗ್ಗೆ ಮಾತನಾಡುವ ಹಕ್ಕಿದೆ. ಲಾಬಾ ಅವರನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ನಾವು ಮನವಿ ಮಾಡುತ್ತೇವೆ” ಎಂದು ಸಹೋದರ ಹೇಳಿದ್ದಾರೆ.

ಭಾನುವಾರ ಬಿರೇನ್ ಸಿಂಗ್ ಮಣಿಪುರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಮುಂದಿನ ಸಿಎಂ ಅಭ್ಯರ್ಥಿಯ ಹುಡುಕಾಟದಲ್ಲಿ ಬಿಜೆಪಿ ತೊಡಗಿದೆ. ಅದಕ್ಕಾಗಿ ನಿರಂತರವಾಗಿ ಸಭೆ ನಡೆಸುತ್ತಲ್ಲೇ ಇದೆ. ಈ ಬಿಕ್ಕಟ್ಟಿನ ಬಗ್ಗೆ ಲಾಬಾ ಟಿವಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...