ಅಸ್ಸಾಂ | ಕ್ರಿಸ್‌ಮಸ್ ಆಚರಣೆ ವೇಳೆ ದಾಂಧಲೆ; ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಬಂಧನ

Date:

ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ ಹಬ್ಬಕ್ಕೆ ಸಂಬಂಧಿಸಿದ ವಸ್ತುಗಳನ್ನು ಕಿತ್ತುಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳಕ್ಕೆ ಸಂಬಂಧಿಸಿದ ನಾಲ್ವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಗಳು ಬೆಲ್ಸೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಾಣಿಗಾಂವ್ ಗ್ರಾಮದಲ್ಲಿರುವ ಸೇಂಟ್ ಮೇರಿ ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಣೆಗಾಗಿ ಮಾಡಲಾಗಿದ್ದ ಅಲಂಕಾರವನ್ನು ಸುಟ್ಟು ಹಾಕಿದ್ದಾರೆ. ಕಾನೂನುಬಾಹಿರವಾಗಿ ಆವರಣವನ್ನು ಪ್ರವೇಶಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

ಆರೋಪಿಗಳು ಹೊರಗಿನ ಅಲಂಕಾರಗಳು, ದೀಪಗಳು, ಸಸಿಗಳ ಕುಂಡಗಳು, ಇತರ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಕೆಲವು ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಶಾಲೆಯ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಬೆಲ್ಸೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಭಾಗಿಯಾಗಿರುವ ಇನ್ನೂ ಕೆಲವರನ್ನು ಗುರುತಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಲ್ಲಿ ವಿಎಚ್‌ಪಿ ನಲ್ಬರಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ದೇಕಾ, ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಮನಶ್ ಜ್ಯೋತಿ ಪಟಗಿರಿ ಮತ್ತು ಸಹ ಕಾರ್ಯದರ್ಶಿ ಬಿಜು ದತ್ತ, ಬಜರಂಗದಳದ ಜಿಲ್ಲಾ ಸಂಚಾಲಕ ನಯನ್ ತಾಲ್ಲೂಕುದಾರ್ ಸೇರಿದ್ದಾರೆ. ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ್ದ ಅವರು ಕ್ರಿಸ್‌ಮಸ್ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ರಾಯ್‌ಪುರದ ಮ್ಯಾಗ್ನೆಟೋ ಮಾಲ್‌ನಲ್ಲಿ ಸುಮಾರು 36ರಿಂದ 50 ಮಂದಿ ಹಿಂದುತ್ವವಾದಿಗಳು ನುಗ್ಗಿ ಕ್ರಿಸ್‌ಮಸ್ ಅಲಂಕಾರ ಮತ್ತು ಸಂತಕ್ಲಾಸ್ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬರೇಲಿಯ ಸೇಂಟ್ ಅಲ್ಫೋನ್ಸಸ್ ಚರ್ಚ್ ಎದುರು ಜಮಾಯಿಸಿದ ಬಜರಂಗದಳದ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ ನಡೆಸಿದ್ದಾರೆ. ಲಜಪತ್ ನಗರದಲ್ಲಿ ಸಂತ ಹ್ಯಾಟ್ ಧರಿಸಿದ್ದ ಮಹಿಳೆಯರು ಮತ್ತು ಮಕ್ಕಳನ್ನು ತಡೆದ ಬಜರಂಗದಳದ ಕಾರ್ಯಕರ್ತರು, ಅವರು ಮತಾಂತರಕ್ಕೆ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ.

ಹೀಗೆ ಸದ್ಯ ದೇಶದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಹಲವು ಘಟನೆಗಳು ನಡೆಯುತ್ತಿದೆ. ಈ ಹಿಂದೆ ಮುಸ್ಲಿಮರ ಮೇಲೆ ದಾಳಿ ನಡೆಸುತ್ತಿದ್ದ ಹಿಂದುತ್ವವಾದಿಗಳು, ಈಗ ಕ್ರೈಸ್ತ ಸಮುದಾಯದ ಮೇಲೆಯೂ ದಾಳಿಗೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುವಂತೆ ಭಾರತೀಯ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನವು (CBCI) ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...