ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಸಚಿವ ಕಪಿಲ್ ಮಿಶ್ರಾಗೆ ಪತ್ರ ಬರೆದ ವಿಎಚ್‌ಪಿ

Date:

ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯ ಹೆಸರನ್ನು ದೆಹಲಿಯ ಬದಲಾಗಿ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಒತ್ತಾಯಿಸಿದೆ. ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ಬರೆದಿದೆ.

- Advertisement -

ವಿಎಚ್‌ಪಿಯ ದೆಹಲಿ ಘಟಕವು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ರೈಲು ನಿಲ್ದಾಣ ಮತ್ತು ಶಹಜಹಾನಾಬಾದ್ ಅಭಿವೃದ್ಧಿ ಮಂಡಳಿಯನ್ನು ಇಂದ್ರಪ್ರಸ್ಥ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಇದನ್ನು ಓದಿದ್ದೀರಾ? ನೆಹರು ಸ್ಮಾರಕದ ಮರುನಾಮಕರಣ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

“ರಾಜಧಾನಿಯ ಹೆಸರನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಪರ್ಕಿಸಿ ಇಟ್ಟುಕೊಳ್ಳಲು ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದು ಬದಲಾಯಿಸಬೇಕು” ಎಂದು ವಿಎಚ್‌ಪಿ ದೆಹಲಿ ಪ್ರಾಂತ್ ಕಾರ್ಯದರ್ಶಿ ಸುರೇಂದ್ರ ಕುಮಾರ್ ಗುಪ್ತಾ ಪತ್ರದಲ್ಲಿ ತಿಳಿಸಿದ್ದಾರೆ.

“ಹೆಸರುಗಳು ಕೇವಲ ಬದಲಾವಣೆಗಳಲ್ಲ. ಅವು ರಾಷ್ಟ್ರದ ಪ್ರಜ್ಞೆಯ ಪ್ರತಿಬಿಂಬವಾಗಿದೆ. ನಾವು ದೆಹಲಿ ಎಂದು ಹೇಳಿದಾಗ, ನಾವು 2,000 ವರ್ಷಗಳ ಅವಧಿಯನ್ನು ಮಾತ್ರ ನೋಡುತ್ತೇವೆ. ಆದರೆ ನಾವು ಇಂದ್ರಪ್ರಸ್ಥ ಎಂದು ಹೇಳಿದಾಗ, ನಾವು 5,000 ವರ್ಷಗಳಷ್ಟು ವಿಸ್ತಾರವಾದ ಅದ್ಭುತ ಇತಿಹಾಸದೊಂದಿಗೆ ಸಂಪರ್ಕ ಹೊಂದುತ್ತೇವೆ” ಎಂದು ಹೇಳಿದರು.

ಹಾಗೆಯೇ “ದೆಹಲಿಯ ಪಾರಂಪರಿಕ ಕೋಟೆಗಳು, ದೇವಾಲಯಗಳು ಮತ್ತು ಹಿಂದೂ ರಾಜರ ಸ್ಮಾರಕಗಳು ಇರಬೇಕು. ಮುಸ್ಲಿಂ ಆಕ್ರಮಣಕಾರರ ಸ್ಮಾರಕಗಳು ಇರುವಲ್ಲೆಲ್ಲಾ, ಪಾಂಡವರ ಕಾಲದ ಹಿಂದೂ ವೀರರು, ಋಷಿಗಳು ಮತ್ತು ಸ್ಥಳಗಳನ್ನು ಸಹ ಪರಿಚಯಿಸಬೇಕು. ಅವುಗಳ ಬಳಿ ಸ್ಮಾರಕಗಳನ್ನು ನಿರ್ಮಿಸಬೇಕು” ಎಂದು ವಿಎಚ್‌ಪಿ ಕಾರ್ಯಕಾರಿಣಿ ಒತ್ತಾಯಿಸಿದ್ದಾರೆ.

ಸ್ಥಳದ ಹೆಸರು ಬದಲಾಯಿಸಬೇಕು ಎಂಬ ಆಗ್ರಹವು ಜನರ ಗಮನವನ್ನು ನೈಜ ವಿಚಾರಗಳಿಂದ ಬೇರೆಡೆ ಸೆಳೆಯುವ ಯತ್ನವಾಗಿದೆ. ಹಾಗೆಯೇ ಈ ರೀತಿ ಜನಪ್ರಿಯ ಹೆಸರುಗಳನ್ನು ಬದಲಾಯಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಪಕ್ಷಗಳು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...