ಅಯೋಧ್ಯೆ | ಪೌರ ಕಾರ್ಮಿಕರು ದೀಪಗಳನ್ನು ಗುಡಿಸುತ್ತಿರುವ ವಿಡಿಯೋ ವೈರಲ್: ಎಸ್‌ಪಿ ನಾಯಕರಿಂದ ಖಂಡನೆ

Date:

ಅಯೋಧ್ಯೆಯಲ್ಲಿ ದೀಪಾವಳಿ ಹಿನ್ನೆಲೆ ದೀಪೋತ್ಸವ ಆಚರಣೆಯ ಬಳಿಕ ಪುರಸಭೆಯ ಪೌರ ಕಾರ್ಮಿಕರು ದೀಪಗಳನ್ನು ಗುಡಿಸಿ ನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ ದೀಪಗಳನ್ನು ಕಸದಂತೆ ಗುಡಿಸಿ ನಂದಿಸಿದಿರುವುದನ್ನು ಸಮಾಜವಾದಿ ಪಕ್ಷ(ಎಸ್‌ಪಿ) ನಾಯಕರು ಖಂಡಿಸಿದ್ದಾರೆ.

- Advertisement -

ಕಳೆದ ಎರಡು ದಿನಗಳಿಂದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಯೋಧ್ಯೆ ಪುರಸಭೆಯ ಪೌರ ಕಾರ್ಮಿಕರು ದೀಪೋತ್ಸವ ಆಚರಣೆಯ ನಂತರ ಪೊರಕೆಗಳಿಂದ ಉರಿಯುತ್ತಿರುವ ದೀಪಗಳನ್ನು ತಳ್ಳಿ ನಂದಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಪ್ರಧಾನಿಯಾಗಿ ನರೇಂದ್ರ ಮೋದಿ ಒಂಬತ್ತು ವರ್ಷದಲ್ಲಿ ಸಾಧಿಸಿದ್ದೇನು? ಭಾಗ-2

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಎಸ್‌ಪಿ ನಾಯಕ, ಉತ್ತರ ಪ್ರದೇಶದ ಮಾಜಿ ಸಚಿವ ಜೈ ಶಂಕರ್ ಪಾಂಡೆ, “ಪುರಸಭೆಯ ನೈರ್ಮಲ್ಯ ಕಾರ್ಮಿಕರ ಕ್ರಮವು ಜನರ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ” ಎಂದು ಹೇಳಿದ್ದಾರೆ.

“ರಾಮ ವನವಾಸದಿಂದ ಹಿಂದಿರುಗಿದರು ಎಂಬ ಭಕ್ತಿ ಮತ್ತು ನಂಬಿಕೆಯಿಂದ ಜನರು ಸರಯು ನದಿಯ ದಡದಲ್ಲಿ ಲಕ್ಷಾಂತರ ದೀಪಗಳನ್ನು ಬೆಳಗಿಸಿದರು. ಆದರೆ ಪೊರಕೆಗಳಿಂದ ಉರಿಯುತ್ತಿರುವ ದೀಪಗಳನ್ನು ನಂದಿಸಲಾಗಿದೆ. ದೀಪ ಬೆಳಗಿಸಿದ ಕೆಲವೇ ಕ್ಷಣಗಳಲ್ಲಿ ಅಗೌರವದಿಂದ ಅವುಗಳನ್ನು ತೆಗೆದುಹಾಕುವುದು ಖಂಡಿತವಾಗಿಯೂ ಹಿಂದೂ ಧರ್ಮದ ಮೇಲಿನ ದಾಳಿ” ಎಂದಿದ್ದಾರೆ.

ಇನ್ನು ಸ್ಥಳೀಯ ಎಸ್‌ಪಿ ನಾಯಕರು ಕೂಡಾ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಈ ಕ್ರಮವನ್ನು ಖಂಡಿಸಿದ್ದಾರೆ.

ಈ ವಿವಾದದ ಬಗ್ಗೆ ಅಯೋಧ್ಯೆ ಪುರಸಭೆ ಆಯುಕ್ತ ಜಯೇಂದ್ರ ಕುಮಾರ್ ಮಾತನಾಡಿ, “ಕೆಲವು ದೀಪಗಳು ಬಹುಶಃ ಉರಿಯುತ್ತಿದ್ದವು. ಆದರೆ ಪೌರ ಕಾರ್ಮಿಕರು ಹೆಚ್ಚಿನ ದೀಪಗಳು ಆರಿಹೋಗಿದ್ದವು” ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ದೀಪೋತ್ಸವ ಆಚರಣೆಯು ಭಾನುವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ನಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...