ತವರು ಕ್ಷೇತ್ರ ವಾರಣಾಸಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾರಿಗೆ ಚಪ್ಪಲಿ ಎಸೆತ: ವಿಡಿಯೋ ವೈರಲ್

Date:

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಮಂಗಳವಾರ ಭೇಟಿ ನೀಡಿದ ವೇಳೆ ಅವರ ಭದ್ರತೆಯಲ್ಲಿ ಭಾರೀ ಲೋಪವಾಗಿದೆ.

- Advertisement -

ನಿನ್ನೆ ವಾರಣಾಸಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ಬುಲೆಟ್ ಪ್ರೂಫ್ ಕಾರಿನ ಮೇಲೆ ಚಪ್ಪಲಿ ಎಸೆಯಲಾಗಿದ್ದು, ಅದು ಬಾನೆಟ್‌ ಮೇಲೆ ಬಿದ್ದಿರುವ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಂದು ವೈರಲ್ ಆಗಿರುವ ಘಟನೆಯ ವಿಡಿಯೋದಲ್ಲಿ ಭದ್ರತಾ ಅಧಿಕಾರಿಯೊಬ್ಬರು ಪ್ರಧಾನಿ ಮೋದಿ ಕುಳಿತಿರುವ ವಾಹನದ ಬಾನೆಟ್ ಮೇಲೆ ಬಿದ್ದ ಚಪ್ಪಲ್ ಅನ್ನು ತೆಗೆದು ಎಸೆಯುತ್ತಾರೆ. ಜನರ ಗುಂಪಿನಲ್ಲಿದ್ದ ಯಾರೋ ಚಪ್ಪಲಿಯನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಮೇಲ್ನೋಟಕ್ಕೆ ಇದು ಭದ್ರತಾ ಲೋಪ ಪ್ರಕರಣದಂತೆ ತೋರುತ್ತಿದೆ. ಕಾರಿನ ಬಾನೆಟ್‌ ಮೇಲೆ ಬಿದ್ದ ಚಪ್ಪಲಿಯನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕುತ್ತಾರೆ. ಈ ಘಟನೆಯ ನಂತರ ಪ್ರಧಾನಿಯ ಕಾರು ನಿಲ್ಲದೆ ಮುಂದೆ ಸಾಗುತ್ತದೆ.

ವಿಡಿಯೋವನ್ನು ರೆಕಾರ್ಡ್ ಮಾಡಿದ ವ್ಯಕ್ತಿಯ ಧ್ವನಿ ಸಹ ಅದರಲ್ಲಿ ರೆಕಾರ್ಡ್ ಆಗಿದ್ದು, ಪ್ರಧಾನಿ ಮೋದಿಯವರ ವಾಹನದ ಮೇಲೆ ಯಾರೋ ಚಪ್ಪಲಿ ಎಸೆದಂತೆ ತೋರುತ್ತಿದೆ ಎಂದು ಹೇಳುತ್ತಿರುವುದು ರೆಕಾರ್ಡ್ ಆಗಿದೆ.

2024ರ ಲೋಕಸಭೆ ಚುನಾವಣೆಯ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿತ್ತು. ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆಗಳು ಪ್ರಾರಂಭವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಶೇ. 15ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಸ್ಪರ್ಧಿಸಿದ್ದರು. ಇವರ ವಿರುದ್ಧ ಮೋದಿಯವರು 1,52,513 ಮತಗಳ ಸಣ್ಣ ಅಂತರದಲ್ಲಿ ಗೆದ್ದಿದ್ದರು. ಈ ಅಂತರವು 2019 ಮತ್ತು 2014 ರ ಕಳೆದ ಎರಡು ಚುನಾವಣೆಗಳಿಗಿಂತ ಕಡಿಮೆ ಅಂತರವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...