ವಿಧಾನಪರಿಷತ್ ಉಪ ಚುನಾವಣೆ | ಇಂದಿನಿಂದ ನಾಮಪತ್ರ ಸಲ್ಲಿಕೆ

Date:

  • ವಿಧಾನಪರಿಷತ್‌ನ ತೆರವಾದ ಸ್ಥಾನಗಳಿಗೆ ಚುನಾವಣೆ
  • ಜೂನ್ 30ಕ್ಕೆ ನಡೆಯಲಿರುವ ಚುನಾವಣಾ ಮತದಾನ

ವಿಧಾನ ಪರಿಷತ್‌ನ ತೆರವಾದ ಮೂರು ಸ್ಥಾನಗಳಿಗಾಗಿನ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.

- Advertisement -

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಮತ್ತು ಲಕ್ಷ್ಮಣ್ ಸವದಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿಈ ಉಪ ಚುನಾವಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಜೂನ್ 30ರಂದು ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ.

ಸೋಲಿನ ಖಾತರಿ ಇದ್ದರೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜೆಡಿಎಸ್‌ ನಿರ್ಧಾರ ಇನ್ನೂ ಹೊರಬೀಳಬೇಕಿದೆ.

ಒಂದೇ ದಿನ ಪ್ರತ್ಯೇಕ ಚುನಾವಣೆ

ವಿಧಾನಪರಿಷತ್‌ನ ಮೂರು ಸ್ಥಾನಗಳೂ ಬೇರೆ ಬೇರೆ ಅವಧಿಯಲ್ಲಿ ಮುಕ್ತಾಯಗೊಳ್ಳುವುದರಿಂದ ಇವಕ್ಕೆ ಪ್ರತ್ಯೇಕವಾಗಿ ಮೂರು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಒಂದೇ ದಿನ ಈ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ.

ಈ ಚುನಾವಣೆಗಾಗಿನ ನಾಮಪತ್ರ ಸಲ್ಲಿಕೆಗೆ ಜೂನ್ 20 ಕೊನೆಯ ದಿನವಾದರೆ, 23ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ಗಡುವು. ಈ ನಡುವೆ ಅಂದರೆ ಜೂನ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಈ ಪ್ರಕ್ರಿಯೆಗಳೆಲ್ಲ ಮುಗಿದ ಬಳಿಕ, ಜೂನ್ 30ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಯಾರ್‍ಯಾರ ಅವಧಿ ಎಲ್ಲಿವರೆಗೆ?

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರು ಅವಧಿಯು 2024ರ ಜೂ.17ರವರೆಗೆ ಇದ್ದರೆ, ಮತ್ತೋರ್ವ ಶಾಸಕ ಆರ್.ಶಂಕರ್ ಅವಧಿಯು 2026ರ ಜೂ.30ಕ್ಕೆ ಮುಕ್ತಾಯವಾಗುತ್ತಿತ್ತು.

ಹಾಗೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವಧಿಯು 2028ರ ಜೂ.14ರವರೆಗೆ ಇತ್ತು. ಆದರೆ ಇವರೆಲ್ಲರೂ ಪಕ್ಷ ಬದಲಿಸಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಈ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ?: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ: ಆಸ್ತಿ ಮುಟ್ಟುಗೋಲಿಗೆ ಕೋರ್ಟ್‌ ಆದೇಶ

ಯಾರು ಯಾರು ಕೈ ಸ್ಪರ್ಧಿಗಳು?

ಸದ್ಯದ ಮಾಹಿತಿಗಳ ಪ್ರಕಾರ ಕಾಂಗ್ರೆಸ್ ಸರ್ಕಾರದ ಸಚಿವರಾಗಿರುವ ಎನ್ಎಸ್ ಬೋಸರಾಜು ಒಂದು ಸ್ಥಾನದ ಉಮೇದುವಾರರು.

ಏಕೆಂದರೆ ಉಭಯ ಸದನಗಳ ಸದಸ್ಯರಲ್ಲದ ಇವರನ್ನು ಪಕ್ಷಕ್ಕೆ ನೀಡಿದ ಕೊಡುಗೆ ಪರಿಗಣಿಸಿ, ಹೈಕಮಾಂಡ್ ಆದೇಶದ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರನ್ನಾಗಿ ಮಾಡಲಾಗಿತ್ತು ಹೀಗಾಗಿ ಇವರಿಗೊಂದು ಸ್ಥಾನ ಪಕ್ಕ.

ಇನ್ನು ಎಐಸಿಸಿ ಅಧ್ಯಕ್ಷರ ಮೇಲಿನ ವಿಶ್ವಾಸದಿಂದ ಮರಳಿ ಪಕ್ಷ ಸೇರಿದ ಮಾಜಿ ಸಚಿವ, ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಅವರನ್ನು ಕಾಂಗ್ರೆಸ್ ಆಯ್ಕೆ ಮರು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಉಳಿದ ಇನ್ನೊಂದು ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮೈಸೂರು ಕಾಂಗ್ರೆಸ್ ಮುಖಂಡೆ, ಮಾಜಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಹಾಗೂ ಮಾಜಿ ಸಚಿವೆ ಉಮಾಶ್ರೀ ಪೈಪೋಟಿ ನಡೆಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...