ವಿಧಾನ ಪರಿಷತ್ | ಜೂನ್‌ 30ರಂದು ಉಪಚುನಾವಣೆ; ಅಂದೇ ಫಲಿತಾಂಶ

Date:

ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದೇ ದಿನ ಫಲಿತಾಂಶ ಹೊರಬೀಳಲಿದೆ ಎಂದೂ ತಿಳಿಸಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಸುವ ಉದ್ದೇಶದಿಂದ ಬಿಜೆಪಿಯ ಮೂವರು ವಿಧಾನ ಪರಿಷತ್ ಸದಸ್ಯರು (ಎಂಎಲ್‌ಸಿ) – ಲಕ್ಷ್ಮಣ್ ಸವದಿ, ಆರ್ ಶಂಕರ್ ಮತ್ತು ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದರು. ಲಕ್ಷ್ಮಣ ಸವದಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಉಳಿದಿಬ್ಬರು ಸೋಲುಂಡಿದ್ದಾರೆ. ಈ ಮೂವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಆಯೋಗವು ಉಪಚುನಾವಣೆ ಘೋಷಿಸಿದೆ.

ಜೂನ್ 13 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಜೂನ್‌ 20 ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆ ಜೂನ್ 21 ರಂದು ನಡೆಯಲಿದೆ. ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಜೂನ್ 30 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂರೂ ಸ್ಥಾನಗಳಿಗೆ ಎಂಎಲ್‌ಸಿಗಳನ್ನು ಶಾಸಕರು ಆಯ್ಕೆ ಮಾಡುತ್ತಾರೆ. ವಿಧಾನಸಭೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ?: ಶಾಲಾ ಪಠ್ಯ ಪರಿಷ್ಕರಣೆ | ಬರಗೂರು ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ ಸರ್ಕಾರ

ವಿಧಾನ ಪರಿಷತ್‌ನ ಒಟ್ಟು 75 ಸ್ಥಾನಗಳ ಪೈಕಿ, ಪ್ರಸ್ತುತ ಬಿಜೆಪಿ 34, ಕಾಂಗ್ರೆಸ್ 24, ಜೆಡಿಎಸ್ 08, ಒಬ್ಬ ಪಕ್ಷೇತರರು ಹಾಗೂ ಒಬ್ಬರು ಅಧ್ಯಕ್ಷರಿದ್ದಾರೆ. ಇನ್ನೂ ಏಳು ಸ್ಥಾನಗಳು ಖಾಲಿ ಇವೆ. ಈ ಪೈಕಿ, ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಮೂರೂ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನ ಸಂಖ್ಯೆಯನ್ನು 27ಕ್ಕೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ.

ಎಂಎಲ್‌ಎಯೂ ಅಲ್ಲದೆ, ಎಂಎಲ್‌ಸಿಯೂ ಅಲ್ಲದೆ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಮಂತ್ರಿಗಿರಿ ಪಡೆದಿರುವ ಎಐಸಿಸಿ ಕಾರ್ಯದರ್ಶಿ ಎನ್‌.ಎಸ್ ಬೋಸರಾಜು ಅವರು ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ-ಆರ್‌ಎಸ್‌ಎಸ್‌ ಹುಟ್ಟಿನಿಂದಲೇ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿಗಳು: ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ ಬಂದ್’ ಬಹುತೇಕ ಶಾಂತಿಯುತ: ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತ್ರಿಕ್ರಿಯೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ...

ಕಾವೇರಿ ಸಭೆ | ಜಲ ವಿವಾದಗಳಿಗೆ ಸಂಬಂಧಿಸಿ ‘ಸಲಹಾ ಸಮಿತಿ’ ರಚಿಸಲು ತಜ್ಞರ ಸಲಹೆ

ಸುಪ್ರೀಂ ಕೋರ್ಟ್‌ನಲಿ ಮೇಕೆದಾಟು ಬಗ್ಗೆ ಬಲವಾಗಿ ವಾದ ಮಂಡನೆಗೆ ಸೂಚನೆ ನೀರು...

ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಚುನಾವಣೆ ಘೋಷಣೆಯಾದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಡಿಸಿಸಿ...

ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ...