ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್; ಕೆಲವರಿಂದ ‘ಮಾನ್ಯ ಅಧ್ಯಕ್ಷರೆ’ ಪದ ಕೇಳಲು ಉತ್ಸುಕಳಾಗಿದ್ದೇನೆ: ನಜ್ಮಾ

Date:

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಸ್ಲಿಂ ಶಾಸಕರೊಬ್ಬರು ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಹೋರಾಟಗಾರ್ತಿ, ಜೆಡಿಎಸ್‌ ಮಹಿಳಾ ಕಾರ್ಯಾಧ್ಯಕ್ಷ ನಜ್ಮಾ ನಜೀರ್, ‘ಕೆಲವರ ಬಾಯಿಂದ ಮಾನ್ಯ ಅಧ್ಯಕ್ಷರೆ ಎಂಬ ಪದ ಕೇಳಲು ಉತ್ಸುಕಳಾಗಿದ್ದೇನೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡಿದೆ. ಕಾಂಗ್ರೆಸ್‌ ಶಾಸಕ ಯು.ಟಿ ಖಾದರ್‌ ಅವರನ್ನು ವಿಧಾನಸಭೆ ಸಭಾಧ್ಯಕ್ಷನ್ನಾಗಿ ನೇಮಿಸಲು ನಿರ್ಧರಿಸಿದೆ. ಮೇ 24ರಂದು ನಡೆಯುವ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಯು.ಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಯು.ಟಿ ಖಾದರ್ ಅವರು ಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿರುವ ಬಗ್ಗೆ ಸಂತಸ ಹಂಚಿಕೊಂಡು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ನಜ್ಮಾ, “ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮುಸಲ್ಮಾನ ಸಮುದಾಯದವರೊಬ್ಬರು ಸಭಾಪತಿಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.ಅದರಲ್ಲೂ ವಿಶೇಷವಾಗಿ ಮಾನ್ಯ ಯು.ಟಿ ಖಾದರ್ ರವರು ಈ ಸ್ಥಾನ ಅಲಂಕರಿಸಿರುವುದು ವಿಧಾನಸಭೆಗೂ ಒಂದು ಭೂಷಣ” ಎಂದಿದ್ದಾರೆ.

“ಪಕ್ಷಾತೀತವಾಗಿ ಎಲ್ಲ ಪಕ್ಷದ ಸದಸ್ಯರ ಹಕ್ಕು ಬಾಧ್ಯತೆಗಳನ್ನು ಕಾಪಾಡುವ ಮೂಲಕ ಸಾಂವಿಧಾನಿಕ ಆಶಯದಂತೆ ಸಭಾಧ್ಯಕ್ಷರ ಹುದ್ದೆಯ ಘನತೆಯನ್ನು ಎತ್ತಿ ಹಿಡಿಯುತ್ತೀರ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

“ಕೆಲವರ ಬಾಯಿಂದ ‘ಮಾನ್ಯ ಅಧ್ಯಕ್ಷರೆ’ ಎಂಬ ಸಂಬೋಧನೆಯನ್ನು ಕೇಳಲು ಉತ್ಸುಕಳಾಗಿದ್ದೇನೆ. ಶುಭಾಶಯಗಳು ಸನ್ಮಾನ್ಯ ಸಭಾಧ್ಯಕ್ಷರೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...