ವಿದ್ಯಾಸಿರಿ ಯೋಜನೆ ಮೊತ್ತ ಎರಡು ಸಾವಿರ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Date:

Advertisements

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೆ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು” ಎಂದು ಘೋಷಿಸಿದರು.

Advertisements

“12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದರು” ಎಂದು ವಿವರಿಸಿದರು.

“ಎಲ್ಲ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು. ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ” ಎಂದರು.

“ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು” ಎಂದು ಹೇಳಿದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

“ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X