ತಮಿಳುನಾಡು ಚುನಾವಣೆ | ಭಾರೀ ಒತ್ತಡವಿತ್ತು, ವಿಜಯ್ ಮಣಿಯಲಿಲ್ಲ; ಬಿಜೆಪಿ ಜೊತೆ ಮೈತ್ರಿ ತಳ್ಳಿಹಾಕಿದ ಟಿವಿಕೆ

Date:

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶುಕ್ರವಾರ ತಳ್ಳಿಹಾಕಿದೆ. ಪಕ್ಷದ ಮುಖ್ಯಸ್ಥ ವಿಜಯ್ ಮೇಲೆ ಮೈತ್ರಿ ಮಾಡಿಕೊಳ್ಳುವಂತೆ ಭಾರೀ ಒತ್ತಡ ಹೇರಲಾಗಿತ್ತು. ಆದರೆ, ಅವರು ಒತ್ತಡಕ್ಕೆ ಮಣಿಯಲಿಲ್ಲ. ದೃಢವಾಗಿ ನಿಂತರು ಎಂದು ಟಿವಿಕೆ ಹೇಳಿದೆ.

- Advertisement -

ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಮಾತನಾಡಿರುವ ಟಿವಿಕೆ ಪ್ರಧಾನ ಕಾರ್ಯದರ್ಶಿ ಅರುಣ್ ರಾಜ್, “ಸಿಬಿಐ ವಿಚಾರಣೆಗಳು ಮತ್ತು ಚಲನಚಿತ್ರ ಸಂಬಂಧಿತ ವಿಷಯಗಳ ಮೂಲಕ ಬಿಜೆಪಿಯಿಂದ ವಿಜಯ್ ಮೇಲೆ ಒತ್ತಡ ತೀವ್ರಗೊಂಡಿವೆ. ಈ ಎಲ್ಲ ಒತ್ತಡಗಳ ಹೊರತಾಗಿಯೂ, ಕೋಮುವಾದಿ ಶಕ್ತಿಗಳೊಂದಿಗೆ ಮೈತ್ರಿ ಇಲ್ಲವೆಂದು ವಿಜಯ್ ಸ್ಪಷ್ಟವಾಗಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಇನ್ನೇನು ಹೇಳಬೇಕು?” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ವಿಜಯ್ ಅವರು ಮಾಮಲ್ಲಪುರಂನಲ್ಲಿ ನಡೆದ ಸಮಾವೇಶದಲ್ಲಿ ‘ಕೋಮುವಾದಿ ಶಕ್ತಿಗಳೊಂದಿಗೆ ಮೈತ್ರಿ ಇರುವುದಿಲ್ಲ’ವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಂತಹ ನಿಲುವನ್ನು ವಿಜಯ್ ಸ್ಪಷ್ಟಪಡಿಸಿರುವಾಗ ಬಿಜೆಪಿ ವಿರುದ್ಧ ಅವರು ಮಾತನಾಡುತ್ತಿಲ್ಲ ಎಂಬ ತರ್ಕಕ್ಕೆ ಅವಕಾಶವಿಲ್ಲ” ಎಂದಿದ್ದಾರೆ.

“ಮೊದಲ ಸಮ್ಮೇಳನದಲ್ಲಿಯೇ, ವಿಜಯ್ ಅವರು ಬಿಜೆಪಿಯನ್ನು ಸೈದ್ಧಾಂತಿಕ ಎದುರಾಳಿ ಎಂದು ಸ್ಪಷ್ಟವಾಗಿ ಘೋಷಿಸಿದರು. ರಾಜ್ಯದಲ್ಲಿನ ಆಡಳಿತ ಪಕ್ಷ ಮತ್ತು ಕೇಂದ್ರದಲ್ಲಿನ ಆಡಳಿತ ಪಕ್ಷ ಎರಡನ್ನೂ ತಮ್ಮ ವಿರೋಧಿಗಳು ಎಂದು ಬಹಿರಂಗವಾಗಿ ಘೋಷಿಸಲು ಬಹಳ ಧೈರ್ಯ ಬೇಕು. ಹಲವು ಸಂದರ್ಭಗಳಲ್ಲಿ ಕೇಂದ್ರದ ಆಡಳಿತ ಪಕ್ಷವು ಒತ್ತಡ ಹೇರಿತು. ಆದರೆ, ನಮ್ಮ ನಾಯಕನ ನಿಲುವು ತುಂಬಾ ಸ್ಪಷ್ಟವಾಗಿದೆ” ಎಂದು ರಾಜ ಹೇಳಿದ್ದಾರೆ.

ತಮಿಳುನಾಡು ಈ ವರ್ಷ ಚುನಾವಣೆ ಎದುರಿಸಲು ಸಜ್ಜಾಗಿದೆ. ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಪ್ರಮುಖ ಸ್ಪರ್ಧೆ ಇರಲಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್, ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಹಾಗೂ ಇತರ ಪಕ್ಷಗಳು ಸೇರಿವೆ. ಎಐಎಡಿಎಂಕೆ ನೇತೃತ್ವದಲ್ಲಿ ಬಿಜೆಪಿ, ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಇತರ ಪಕ್ಷಗಳ ಎನ್‌ಡಿಎ ಸ್ಪರ್ಧೆಯಲ್ಲಿದೆ. ವಿಜಯ್ ಅವರ ಟಿವಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...