ಸೋನಿಯಾ, ರಾಹುಲ್ ಭೇಟಿಯಾಗದೇ ವಿಜಯ್ ವಾಪಸ್ ಬಳಿಕ ವದಂತಿ: ಟಿವಿಕೆ ಜತೆ ಭಿನ್ನಾಭಿಪ್ರಾಯವಿಲ್ಲ ಕಾಂಗ್ರೆಸ್

Date:

ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ದೆಹಲಿ ಭೇಟಿಯ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರುಗಳಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿಯಾಗದೆಯೇ ತೆರಳಿದ್ದಾರೆ. ರಾಹುಲ್, ಸೋನಿಯಾ ಜತೆಗಿನ ಸಭೆಯನ್ನೂ ಮುಂದೂಡಲಾಗಿದೆ. ವಿಜಯ್ ಈ ನಡೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಭಿನ್ನಾಭಿಪ್ರಾಯ ವದಂತಿಯನ್ನು ಕಾಂಗ್ರೆಸ್ ತಳ್ಳಿಹಾಕಿದೆ. ತಮಿಳುನಾಡಿನ ಮಿತ್ರಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

- Advertisement -

ಎರಡು ದಿನಗಳ ದೆಹಲಿಯಲ್ಲಿದ್ದ ವಿಜಯ್ ನಿನ್ನೆ ಬೆಳಿಗ್ಗೆ 10 ಗಂಟೆಗೆ ರಾಹುಲ್ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿತ್ತು. ಆದರೆ ಬುಧವಾರ ರಾತ್ರಿ ತಡವಾಗಿ ಸಭೆಯನ್ನು ಮುಂದೂಡಲಾಗಿತ್ತು. ನಾಯಕರು ಸಮಯ ಹೊಂದಿಸಿಕೊಳ್ಳಲು ಸಾಧ್ಯವಾಗದ ಕಾರಣ ಸಭೆಯನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿಯನ್ನು ಭೇಟಿಯಾದ ತಮಿಳು ಸಿಎಂ ವಿಜಯ್; ಮೇಕೆದಾಟು ಯೋಜನೆ ಅನುಮತಿಸದಂತೆ ಒತ್ತಾಯ

ಬುಧವಾರ ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕಕ್ಕೆ ಸಂಬಂಧಿಸಿದ ಮೇಕೆದಾಟು ಅಣೆಕಟ್ಟು ವಿಷಯವನ್ನು ವಿಜಯ್ ಪ್ರಸ್ತಾಪಿಸಿದ್ದರು. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಶಿಲಾನ್ಯಾಸ ಸಮಾರಂಭವನ್ನು ಕರ್ನಾಟಕ ಘೋಷಿಸಿದ ಬಗ್ಗೆ ವಿಜಯ್ ಕಳವಳ ವ್ಯಕ್ತಪಡಿಸಿದ್ದರು. ಈ ಕ್ರಮವು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್‌ನೊಂದಿಗೆ ಭಿನ್ನಾಭಿಪ್ರಾಯದ ವದಂತಿ ಹರಡಿತ್ತು.

ತಮಿಳುನಾಡು ಕಾಂಗ್ರೆಸ್ ಸಂಸದ ಕ್ರಿಸ್ಟೋಫರ್ ತಿಲಕ್ ಅವರು ಮಿತ್ರ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. “ನಾವು ಮಿತ್ರ ಪಕ್ಷ ಮತ್ತು ಸರ್ಕಾರದ ಭಾಗ. ಯಾವುದೇ ತೊಡಕು ಅಥವಾ ಭಿನ್ನಾಭಿಪ್ರಾಯವಿಲ್ಲ. ಸಿಎಂ ವಿಜಯ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಅವರನ್ನು ಹೃತ್ಪೂರ್ವಕವಾಗಿ ಬೆಂಬಲಿಸಿದ ಮೊದಲ ನಾಯಕರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು” ಎಂದು ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಗೆಯೇ ಕೊನೆಯ ಕ್ಷಣದಲ್ಲಿ ಸಭೆ ಮುಂದೂಡಿಕೆ ಮಾಡಿರುವ ಕಾರಣಗಳನ್ನೂ ವಿವರಿಸಿದರು. “ಕರ್ನಾಟಕದ ನಾಯಕರು (ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್) ಇಂದು ಆಗಮಿಸಿದರು. ಜಾರ್ಖಂಡ್‌ನ ರಾಜ್ಯಸಭಾ ಸ್ಥಾನಗಳ ಕುರಿತು ಕಳೆದ ಎರಡು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ. ನಾಯಕತ್ವವು ಈ ವಿಷಯಗಳ ಚರ್ಚೆಯಲ್ಲಿ ವ್ಯಸ್ತವಾಗಿರುವ ಕಾರಣ ಸಿಎಂ ಜತೆಗಿನ ಸಭೆ ಸಾಧ್ಯವಾಗಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಮುಂದಿನ ತಿಂಗಳ ಭೇಟಿಯ ಸಮಯದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿದ್ದಾರೆ. ಸಭೆಯನ್ನು ರದ್ದುಗೊಳಿಸಲಾಗಿಲ್ಲ, ಮುಂದೂಡಲಾಗಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಸಿಎಂ ಹೊರಟಿದ್ದಾರೆ. ಜೂನ್ 11ರಂದು ನೀತಿ ಆಯೋಗ ಸಭೆಗಾಗಿ ಮತ್ತೆ ನವದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ನಮ್ಮ ನಾಯಕರಾದ ರಾಹುಲ್ ಮತ್ತು ಸೋನಿಯಾ ಗಾಂಧಿಯನ್ನು ಭೇಟಿಯಾಗುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...