ವಿಜಯ ಸಂಕಲ್ಪ ಯಾತ್ರೆ ; ಸಮಾರೋಪ ಸಮಾವೇಶಕ್ಕೆ 10 ಲಕ್ಷ ಜನ ಸೇರಿಸಲು ಮುಂದಾದ ಬಿಜೆಪಿ

Date:

  • ದಾವಣಗೆರೆಯಲ್ಲಿ ಬಿಜೆಪಿ ಶಕ್ತಿಪ್ರದರ್ಶನ
  • ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಹೆಸರಿನಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಮಾರ್ಚ್ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅದಕ್ಕಾಗಿ 10 ಲಕ್ಷ ಜನರನ್ನು ಕಲೆಹಾಕಲು ಪಕ್ಷ ಮುಂದಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದ ಜಿ ಎಂ ಸಿದ್ದೇಶ್ವರ್, “ದಾವಣಗೆರೆ ಜಿಲ್ಲೆಯಿಂದಲೇ 3 ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.

ಸಮಾವೇಶ ನಡೆಯಲಿರುವ ಜಿಎಂಐಟಿ ಕಾಲೇಜಿನ ಪಕ್ಕದ 400 ಎಕರೆ ಜಾಗದಲ್ಲಿ ಪೆಂಡಾಲ್ ಹಾಕಲಾಗಿದೆ. ಜನರ ನಡುವೆಯೇ ಮೋದಿ ವೇದಿಕೆ ಪ್ರವೇಶಿಸುವ ಯೋಜನೆ ರೂಪುಗೊಂಡಿದೆ. ಅದಕ್ಕೆ ತಕ್ಕಂತೆ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ- ರಾಜ್ಯದ ಸಚಿವರ ಜೊತೆಗೆ ಇತರ ಪ್ರಮುಖರು ಭಾಗವಹಿಸುತ್ತಾರೆ ಎಂದರು.

ಇನ್ನು ವಿಜಯ ಸಂಕಲ್ಪ ಯಾತ್ರೆ ಬಗ್ಗೆ ಮಾಹಿತಿ ನೀಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, “4 ಭಾಗಗಳಲ್ಲೂ ನಡೆದ ವಿಜಯ ಸಂಕಲ್ಪ ಯಾತ್ರೆಗಳು ಯಶಸ್ವಿಯಾಗಿವೆ. 5,600 ಕಿ.ಮೀ.ಗಳನ್ನು ಒಟ್ಟು ಯಾತ್ರೆ ಮೂಲಕ ಕ್ರಮಿಸಲಾಗಿದೆ. ಲಕ್ಷಾಂತರ ಜನರು ಯಾತ್ರೆಯಲ್ಲಿ ಭಾಗಿಯಾಗಿದ್ದು, ಇದರ ಮೂಲಕ ನಾವು 224 ಕ್ಷೇತ್ರಗಳನ್ನೂ ತಲುಪಿದ್ದೇವೆ” ಎಂದರು.

ಇದೇ 25ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಳ್ಳುಲಿದ್ದಾರೆ. ಬರುವವರಿಗೆ ದೊಡ್ಡ ಪ್ರಮಾಣದಲ್ಲಿ ಊಟೋಪಚಾರ ವ್ಯವಸ್ಥೆ ಮಾಡಲಾಗಿದ್ದು, 400 ಕೌಂಟರ್ಗಳನ್ನು ತೆರೆಯಲಾಗುತ್ತದೆ. ಸಾವಿರ ಜನ ಅಡುಗೆ ಮಾಡುವವರನ್ನು ಇದಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಉಳಿದಂತೆ ಪಾರ್ಕಿಂಗ್‌ಗೆ 44 ಜಾಗಗಳನ್ನು ಗುರುತಿಸಿದ್ದೇವೆ. ಕಾರ್ಯಾಲಯ, ಸ್ವಚ್ಛತೆ ಸೇರಿ ಹಲವು 45 ತಂಡಗಳನ್ನು ನಿಯೋಜಿಸಿದ್ದೇವೆ. 5 ಸಾವಿರ ಪ್ರಬಂಧಕರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಮಹೇಶ್ ಟೆಂಗಿನ ಕಾಯಿ ಹೇಳಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...