ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಚೇರ್‌ಮೆನ್ ಹುದ್ದೆಯಿಂದ ಕೆಳಗಿಳಿದ ವಿಜಯ್ ಶೇಖರ್ ಶರ್ಮಾ

Date:

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ತಿಂಗಳ ಬಳಿಕ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಘಟಕದ ಚೇರ್‌ಮೆನ್ ಮತ್ತು ಮಂಡಳಿಯ ಸದಸ್ಯ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ನೀಡಿ, ಹುದ್ದೆಯಿಂದ ಕೆಳಗಿಳಿದಿರುವುದಾಗಿ ವರದಿಯಾಗಿದೆ.

- Advertisement -

ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿತ್ತು. ಈ ವರದಿಯ 15 ದಿನಗಳ ನಂತರ ವಿಜಯ್ ಶೇಖರ್ ಶರ್ಮಾ ಚೇರ್‌ಮೆನ್ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸುದ್ದಿ ಸಂಸ್ಥೆ ‘ಪಿಟಿಐ’ ಟ್ವೀಟ್ ಮೂಲಕ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತೆರವಾದ ಸ್ಥಾನಕ್ಕೆ ಸರ್ಕಾರಿ ಸ್ವಾಮ್ಯದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್ ಮತ್ತು ಇಬ್ಬರು ನಿವೃತ್ತ ಐಎಎಸ್ ಅಧಿಕಾರಿಗಳು ಮಂಡಳಿಗೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮೂಲಕ ಆಗಿರುವ ಅವ್ಯವಹಾರ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು.

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದ ತಿಂಗಳ ಬಳಿಕ ಈ ಬೆಳವಣಿಗೆ ನಡೆದಿದೆ.

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ಆದೇಶ ಹೊರಡಿಸಿತ್ತು. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶದಲ್ಲಿ ತಿಳಿಸಿತ್ತು.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರ್‌ಬಿಐ, “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರಿದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಹಾಗೂ ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.

2022 ಮಾರ್ಚ್‌ 11ರಲ್ಲೇ ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ಆದೇಶದ ಬೆನ್ನಲ್ಲೇ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ನಿರ್ದೇಶಕ ಮಂಜು ಅಗರ್ವಾಲ್ ರಾಜೀನಾಮೆ ನೀಡಿದ್ದರು.

‘ಪೇಟಿಎಂ ಮುಖ್ಯಸ್ಥ ಮೋದಿ ಭಕ್ತ’ ಎಂದಿದ್ದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ್ದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿತ್ತು.

ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ. ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹೀರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...