ವಿಜಯಪುರ | ಸುಜ್ಲಾನ್‌ನಿಂದ ₹30 ಸಾವಿರ ಕೋಟಿ, ರೆನೈಸಾನ್ಸ್‌ ನಿಂದ ₹6 ಸಾವಿರ ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

Date:

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಮತ್ತು ಸೌರವಿದ್ಯುತ್‌ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್‌ ಮತ್ತು ರೆನೈಸಾನ್ಸ್‌ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಮಾತು ನಡೆಸಿದರು.

- Advertisement -

ಸುಜ್ಲಾನ್‌ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್‌ ಸೋಲಾರ್‌ ಮತ್ತು ಎಲೆಕ್ಟ್ರಾನಿಕ್‌ ಮೆಟೀರಿಯಲ್ಸ್‌ ಕಂಪನಿಯ ಸಿಇಒ ಮಿಲಿಂದ್‌ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಳಿಕ ಮಾತನಾಡಿದ ಸಚಿವರು, “ಸುಜ್ಲಾನ್‌ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಅಗತ್ಯವಿರುವ 160 ಮೀಟರ್‌ ಎತ್ತರದ ಕಂಬಗಳು ಮತ್ತು 70 ಮೀಟರ್‌ ಉದ್ದದ ಬೃಹತ್‌ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲು ತೀರ್ಮಾನಿಸಿದ್ದು, 100 ಎಕರೆ ಜಮೀನನ್ನು ಕೇಳಿದೆ. ಇದು ವಿಜಯಪುರ ಜಿಲ್ಲೆಗೆ ಹರಿದು ಬರಲಿರುವ ಬೃಹತ್‌ ಹೂಡಿಕೆಯಾಗಲಿದೆ” ಎಂದರು.

“ಈಗಾಗಲೇ ನಡೆಸಿರುವ ಅಧ್ಯಯನಗಳ ಪ್ರಕಾರ ಇಡೀ ದೇಶದಲ್ಲಿ ವಿಜಯಪುರ, ಆಂಧ್ರಪ್ರದೇಶದ ಅನಂತಪುರ ಮತ್ತು ರಾಜಾಸ್ಥಾನದ ಜೈಸಲ್ಮೇರ್‌ ಮಾತ್ರ ಪವನ ವಿದ್ಯುತ್‌ ಉತ್ಪಾದನೆಗೆ ಅತ್ಯಂತ ಪ್ರಶಸ್ತ ತಾಣಗಳೆಂದು ಗೊತ್ತಾಗಿದೆ. ಅನಂತಪುರ ಮತ್ತು ಜೈಸಲ್ಮೇರ್‌ ಗಳಲ್ಲಿ ಸುಜ್ಲಾನ್‌ ಕಂಪನಿಯು ಈಗಾಗಲೇ ಕ್ರಮವಾಗಿ 2,000 ಮತ್ತು 3,000 ಮೆಗಾವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಪವನ ವಿದ್ಯುತ್‌ ಘಟಕಗಳನ್ನು ಹೊಂದಿದೆ. ವಿಜಯಪುರದಲ್ಲಿ ಕಂಪನಿಯು 5,000 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತೀ ದೊಡ್ಡ ಪವನ ವಿದ್ಯುತ್‌ ಘಟಕವಾಗಿರಲಿದೆ” ಎಂದು ತಿಳಿಸಿದರು.

“ಸುಜ್ಲಾನ್‌ ಕಂಪನಿಯು ಇಲ್ಲಿ ತಯಾರಿಸಲಿರುವ ಕಂಬ ಮತ್ತು ಬ್ಲೇಡುಗಳನ್ನು ಸ್ಥಳೀಯವಾಗಿಯೇ ಬಳಸಲಿದೆ. ಕಂಪನಿಗೆ ಅಗತ್ಯವಿರುವ 100 ಎಕರೆ ಜಮೀನನ್ನು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೊಡಲು ಏನೂ ಸಮಸ್ಯೆ ಇಲ್ಲ. ಅಕಸ್ಮಾತ್‌ ಕಂಪನಿಯು ಜಿಲ್ಲೆಯ ಬೇರೆಡೆಗಳಲ್ಲಿ ತನಗೆ ಅಗತ್ಯವಿರುವ ಸೂಕ್ತ ಭೂಮಿ ಲಭ್ಯವಿದೆ ಎಂದು ಭಾವಿಸಿದರೆ, ಅಷ್ಟು ಪ್ರಮಾಣದ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಕೊಡಲಾಗುವುದು. ಒಟ್ಟಿನಲ್ಲಿ ಈ ಕಂಪನಿಯು ವಿಜಯಪುರಕ್ಕೆ ಬರಬೇಕು ಎನ್ನುವುದು ಸರಕಾರದ ಗುರಿಯಾಗಿದ್ದು, ಇದಕ್ಕಾಗಿ ʻಬಿಯಾಂಡ್‌ ಬೆಂಗಳೂರುʼ ಉಪಕ್ರಮದಡಿ ಇರುವ ಸೌಲಭ್ಯ, ಪ್ರೋತ್ಸಾಹಗಳನ್ನೆಲ್ಲ ಕೊಡಲಾಗುವುದು. ಇದಕ್ಕೆ ಕಂಪನಿಯ ಸಿಇಒ ಒಪ್ಪಿಕೊಂಡಿದ್ದು, ಸದ್ಯದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಅಂತಿಮವಾಗಿ ಒಡಂಬಡಿಕೆಗೆ ಸಹಿ ಹಾಕಲಾಗುವುದು” ಎಂದು ಅವರು ಮಾಹಿತಿ ನೀಡಿದರು.

ರೆನೈಸಾನ್ಸ್‌ ಕಂಪನಿಯಿಂದ 6,000 ಸಾವಿರ ಕೋಟಿ ರೂ. ಹೂಡಿಕೆ

“ಇದಲ್ಲದೆ, ಸೌರ ಫಲಕಗಳ (ಸೋಲಾರ್‌ ಪ್ಯಾನೆಲ್ಸ್)‌ ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್‌ ಸೋಲಾರ್‌ ಮತ್ತು ಎಲೆಕ್ಟ್ರಾನಿಕ್‌ ಮೆಟೀರಿಯಲ್ಸ್‌ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು 6,000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಈ ಸಂಬಂಧ ಕಂಪನಿಯ ಸಿಇಒ ಮಿಲಿಂದ್‌ ಕುಲಕರ್ಣಿ ಅವರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದೆ ಎಂದು ಸಚಿವ ಪಾಟೀಲ್ ಇದೇ ಸಂದರ್ಭದಲ್ಲಿ ತಿಳಿಸಿದರು.

“ಈ ಕಂಪನಿ ಕೂಡ ತನಗೆ 100 ಎಕರೆ ಜಮೀನು, 80 ಮೆಗಾವ್ಯಾಟ್‌ ವಿದ್ಯುತ್‌ ಮತ್ತು ಪ್ರತಿನಿತ್ಯ 10 ಎಂಎಲ್‌ಡಿ ನೀರಿನ ಅಗತ್ಯವಿದೆ ಎಂದು ತಿಳಿಸಿದೆ. ಜಮೀನು ಮತ್ತು ವಿದ್ಯುತ್ತಿಗೆ ಜಿಲ್ಲೆಯಲ್ಲಿ ಸಮಸ್ಯೆಯೇನೂ ಇಲ್ಲ. ಆಲಮಟ್ಟಿ ಅಣೆಕಟ್ಟೆಯಿಂದ ಕಂಪನಿಗೆ ಅಗತ್ಯವಿರುವಷ್ಟು ನೀರನ್ನೂ ಕೊಡಬಹುದು. ಕಂಪನಿಯು ಆರಂಭದಲ್ಲಿ 2,500 ಕೋಟಿ ರೂ. ಹಣ ಹೂಡಲಿದ್ದು, 5,000 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್‌ ಗ್ರೋತ್‌ & ವೇಫರಿಂಗ್‌ ಯೂನಿಟ್)‌ ಆರಂಭಿಸಲಿದೆ. 2025ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲು ಉದ್ದೇಶಿಸಲಿದೆ. ಇದರಿಂದ 1 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ” ಎಂದು ವಿವರಿಸಿದರು.

“ರೆನೈಸಾನ್ಸ್‌ ಕಂಪನಿಯು 2030ರ ಹೊತ್ತಿಗೆ ತನ್ನ ಘಟಕವನ್ನು 20 ಸಾವಿರ ಮೆಗಾವ್ಯಾಟ್‌ ಮಟ್ಟಕ್ಕೆ ಕೊಂಡೊಯ್ಯುವ ನೀಲನಕಾಶೆಯನ್ನು ಹೊಂದಿದೆ. ಆಗ 3,000ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ. ಕಂಪನಿಯು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಿದ್ದು, ಅಂತಿಮವಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ” ಎಂದು ಹೇಳಿದರು.

ಕೆಐಎಡಿಬಿ ಸಿಇಒ ಡಾ.ಮಹೇಶ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...