ವಿಜಯಪುರ | ತಮ್ಮ ಕ್ಷೇತ್ರಕ್ಕೆ ನೀರು ಬರದಿದ್ದರೆ ರಾಜೀನಾಮೆ ನೀಡುತ್ತೇನೆ: ಕಾಂಗ್ರೆಸ್ ಶಾಸಕ

Date:

Advertisements

ತಮ್ಮ ಕ್ಷೇತ್ರದ ಗ್ರಾಮಗಳಿಗೆ ಕಾಲುವೆಗಳ ಮೂಲಕ ಕೃಷಿಗೆ ನೀರು ಪೂರೈಕೆ ಮಾಡದಿದ್ದಾರೆ ರಾಜೀನಾಮೆ ನೀಡುವುದಾಗಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂಡಿ ತಾಲೂಕಿನ ಕೊನೆಯ ಭಾಗದ ಹಳ್ಳಿಗಳಿಗೆ ಕಾಲುವೆ ನೀರು ಬಂದಿಲ್ಲ. ಈ ಹಳ್ಳಿಗಳಿಗೆ ನೀರು ಹರಿಸುವುದಕ್ಕಾಗಿಯೇ ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಗಳಿವೆ. ಅವುಗಳ ಮೂಲಕ ನೀರು ಹರಿಸದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

“ಇಂಡಿ ತಾಲೂಕು ಬರಪೀಡಿತವಾಗಿದೆ. ಹೀಗಿದ್ದರೂ, ತಾಲೂಕಿನ ಹಳ್ಳಿಗಳಿಗೆ ನೀರು ಪೂರೈಕೆಯಾಗಿಲ್ಲ. ನೀರು ಬರದೆ ಹೋದರೆ ನಾನು ಯಾರಿಗೂ ‘ಕೇರ್’ ಮಾಡುವುದಿಲ್ಲ. ಜನರಿಗೆ ಅನುಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುತ್ತೇನೆ. ಜನರ ಸಮಸ್ಯೆಗೆ ಸ್ಪಂದಿಸಲು ಆಗಿದಿದ್ದ ಮೇಲೆ ಯಾಕಾಗಿ ರಾಜಕೀಐ ಮಾಡಬೇಕು” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X