ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ : ಅಸಮಾಧಾನ ಶಮನಕ್ಕೆ ಯತ್ನ

Date:

  • ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ
  • ‘ಜಾರಕಿಹೊಳಿ ನಡೆ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿದ್ದವು’

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುರುವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿಯಾದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗುತ್ತಿದ್ದಂತೆ ಅನೇಕ ನಾಯಕರ ಅಸಮಾಧಾನಕ್ಕೆ ಬಿ ವೈ ವಿಜಯೇಂದ್ರ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೆ ಮುಂದಾಗಿರುವ ವಿಜಯೇಂದ್ರ, ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದಾರೆ.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಭೇಟಿ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬಿ ವೈ ವಿಜಯೇಂದ್ರ, “ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ” ಎಂದರು.

“ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಕೆಲವು ಸಂದರ್ಭದಲ್ಲಿ ಅವರು ಅಸಮಾಧಾನವನ್ನೂ ತೋಡಿಕೊಂಡಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಶ್ರಮಿಸೋಣ ಎಂದು ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿರುವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸರ್ಕಾರದ 6 ತಿಂಗಳ ಸಾಧನೆಗೆ ವ್ಯತಿರಿಕ್ತ ಪಟ್ಟಿ ಬಿಡುಗಡೆಗೊಳಿಸಿ ಲೇವಡಿ ಮಾಡಿದ ಬಿಜೆಪಿ

“ರಮೇಶ್ ಜಾರಕಿಹೊಳಿ ಜೊತೆ ಸುಮಾರು 30 ನಿಮಿಷ ಮಾತನಾಡಿದ್ದೇನೆ. ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ. ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುತ್ತೇವೆ ಎಂದಿದ್ದಾರೆ” ಎಂದರು.

“ನಾನೊಬ್ಬ ರಾಜ್ಯಾಧ್ಯಕ್ಷ. ನನ್ನ ಕೆಲಸ ಮಾತನಾಡಬೇಕು. ಕಾರ್ಯಕರ್ತನಾಗಿ, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುವ ಮೂಲಕ, ಸಂಘಟನೆಗೆ ಒತ್ತು ಕೊಡುವೆ. ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಮೂಲಕ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆದ್ದು ಅವರನ್ನು ದೆಹಲಿಗೆ ಕಳಿಸುವ ಮೂಲಕ ನಾನು ಕರ್ತವ್ಯ ನಿರ್ವಹಿಸುತ್ತೇನೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...