ವಿಜಯೇಂದ್ರನಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನಾವು ಬಿಡುವುದಿಲ್ಲ: ಕೆ ಎಸ್‌ ಈಶ್ವರಪ್ಪ ಬಾಂಬ್

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸ್ಥಾನ ಬರುವ ದಿನಗಳಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಲಿದೆ” ಎಂದರು.

“ಒಂದು ಕುಟುಂಬದ ಕೈಯಲ್ಲಿ ನಮ್ಮ ಪಕ್ಷ ಹತೋಟಿಗೆ ಸಿಗುವದು ಬೇಡ. ಇದು ಕೇವಲ ನನ್ನ ಅಪೇಕ್ಷೆಯಲ್ಲ. ಎಲ್ಲ ಕಾರ್ಯಕರ್ತರ ಅಪೇಕ್ಷೆ. ಮುಂದೆ ಎಲ್ಲರೂ ಕುಳಿತು ಒಂದು ನಿರ್ಧಾರಕ್ಕೆ ಬರುತ್ತೇವೆ. ವಿಜಯೇಂದ್ರನಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನಾವು ಬಿಡುವುದಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನನ್ನ ಪುತ್ರ ಕಾಂತೇಶ್​​ಗೆ ವಿಧಾನ ಪರಿಷತ್​ ಸ್ಥಾನ ಕೊಡುತ್ತೇವೆ ಅಂತ ಹೇಳಿದ್ದರು. ನನ್ನನ್ನು ರಾಜ್ಯಪಾಲರನ್ನಾಗಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಹೇಳಿದ್ದರು. ಆದರೆ ನನಗೆ ಸ್ಥಾನಮಾನಗಳು ಬೇಡ, ಪಕ್ಷ ಉಳಿಯಬೇಕು ಅಷ್ಟೆ ಎಂದು ತಿಳಿಸಿದ್ದೇನೆ. ಹೀಗಾಗಿ ನಾನು ಸ್ಪರ್ಧಿಸುತ್ತಿರುವೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ” ಎಂದರು.

ಒಂದು ಅವಧಿಗೆ ನೇಮಕ ಮಾಡಿದ್ದಾರೆ: ವಿಜಯೇಂದ್ರ

ಕೆ ಎಸ್‌ ಈಶ್ವರಪ್ಪ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “ಈಶ್ವರಪ್ಪ ಅವರ ಹೇಳಿಕೆಗೆ ನಾನು ಹೆಚ್ಚು ಪ್ರತಿಕ್ರಿಯಿಸಲ್ಲ. ಒಂದು ಅವಧಿಗೆ ನನ್ನನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಅಂತ ಭಾವಿಸುತ್ತೇನೆ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು ಅಷ್ಟೆ” ಎಂದು ತಿಳಿಸಿದರು.

“ಬಂಡಾಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗುವುದಿಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಾಗಿದೆ. ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದರು.

“ಸಭೆಯಲ್ಲಿ ಬಾಕಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಮಾ.22ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಸಭೆಯಲ್ಲಿ ಚರ್ಚಿಸಲಾದ ಎಲ್ಲ ವಿಷಯಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಹೇಳಿದರು.‌

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ...

ಸಚಿವ ಸಂಪುಟ ಸಭೆ | 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಅಧಿಕಾರ ಮುಖ್ಯಮಂತ್ರಿಗೆ

ವಿಧಾನಸೌಧದಲ್ಲಿ ಗುರುವಾರ (ಜೂ.20) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ...