ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಯತ್ನಾಳ್ ಬಣ ಒತ್ತಾಯಿಸುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟ ದಿನೇ-ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ನಾಲ್ವರು ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಸೇರಲಿದ್ದಾರೆ’ ಎಂದು ಪ್ರದೀಪ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್, “ಬಿಜೆಪಿಯ ಪ್ರಮುಖ ನಾಲ್ಕು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಶಾಸಕ ಯತ್ನಾಳ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಾಂಗ್ರೆಸ್‌ಗೆ ಬರುತ್ತಾರೆ” ಎಂದು ಹೇಳಿದ್ದಾರೆ.
“ಈ ನಾಲ್ವರೂ ಕಾಂಗ್ರೆಸ್‌ಗೆ ಬರಬೇಕು. ಪಕ್ಷಕ್ಕೆ ಬಂದರೆ, ಅವರನ್ನು ಬಿಜೆಪಿಯಲ್ಲಿದ್ದುದ್ದಕ್ಕಿಂತ ಚೆನ್ನಾಗಿ ನೋಡಿಕೊಳ್ಳುತ್ತೇವೆ. ಅವರು ಪಕ್ಷಕ್ಕೆ ಬರಬೇಕು ಎಂಬುದು ನನ್ನ ಬಯಕೆ” ಎಂದಿದ್ದಾರೆ.