ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಮುದ್ದುಬೀರನ ಹುಂಡಿ ಗ್ರಾಮಸ್ಥರು

Date:

​ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್​ ಹಾಕಿರುವ ಘಟನೆ ಶುಕ್ರವಾರ ನಡೆದಿದೆ.

ವರುಣಾ ಕ್ಷೇತ್ರದ ಮುದ್ದುಬೀರನ ಹುಂಡಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್‌ ಹಾಕಿದ್ದು, ಗ್ರಾಮದ ಒಳಗೆ ಪ್ರವೇಶಿಸದಂತೆ ತಡೆದಿದರು. ಗ್ರಾಮದ ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಗ್ರಾಮ ಪ್ರವೇಶ ಮಾಡದಂತೆ ಘೋರಾವ್ ಹಾಕಿರುವ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯರನ್ನು ಎಳೆದಾಡಿದ್ದಾರೆ. ಮಹಿಳೆಯರು ಕೂಡ ಯತೀಂದ್ರ ವಿರುದ್ಧ ಸಿಟ್ಟು, ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ನೂಕಾಟ, ತಳ್ಳಾಟ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ಕೂಡಲೇ ಪೊಲೀಸರು ಮಧ್ಯ ಪ್ರವೇಶ ಮಾಡಿ ಗ್ರಾಮಸ್ಥರನ್ನು ಶಾಂತಗೊಳಿಸುವ ಪ್ರಯತ್ನ ಮಾಡಿದರು. ಆದರೆ ಪೊಲೀಸರ ಮಾತಿಗೂ ಬಗ್ಗದ ಗ್ರಾಮಸ್ಥರು, ಮಾಜಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಿಡಿ

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್​ ಹಾಕಿರುವ ಘಟನೆ ಹಿಡಿದುಕೊಂಡು ಸಿದ್ದರಾಮಯ್ಯ ಮತ್ತು ಪುತ್ರನ ಮೇಲೆ ಬಿಜೆಪಿ ಕಿಡಿಕಾರಿದೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಬಿಜೆಪಿ, “ಮಜಾವಾದಿ ಸಿದ್ದರಾಮಯ್ಯ ಅವರ ಮೇಲೆ ವರುಣಾ ಕ್ಷೇತ್ರದ ಮತದಾರರ ಸಿಟ್ಟು ಎಷ್ಟಿದೆ ಎಂದರೆ, ಪುತ್ರ ಯತೀಂದ್ರ ಅವರನ್ನೇ ಮುದ್ದಬೀರನಹುಂಡಿ ಗ್ರಾಮಸ್ಥರು ಘೇರಾವ್‌ ಹಾಕಿ ತಳ್ಳಾಡಿದ್ದಾರೆ. ಗ್ರಾಮಸ್ಥರ ಆಕ್ರೋಶಕ್ಕೆ ಪೊಲೀಸರೇ ದಂಗಾಗಿ ಹೋಗಿದ್ದಾರೆ. ಕೇವಲ ಕಿವಿ ಮೇಲೆ ಹೂ ಇಡುವ ಕೆಲಸವನ್ನೇ ಮಾಡುತ್ತಾ ಬಂದ ಅಪ್ಪ-ಮಗನಿಗೆ ಜನರು ಜಾಗೃತರಾಗಿ ಬಿಸಿ ಮುಟ್ಟಿಸಿದ್ದಾರೆ” ಎಂದು ಕುಟುಕಿದೆ.

“ರಾಜ್ಯದ ಜನರ ತಾಳ್ಮೆಯ ಕಟ್ಟೆ ಒಡೆದಿದೆ. ಕಾಂಗ್ರೆಸ್‌ ಶಾಸಕರು, ಸಚಿವರು ಜನರ ಎದುರು ಹೋದರೆ ತಕ್ಕ ಮಂಗಳಾರತಿ ಆಗುವುದು ಉಚಿತ ಖಚಿತ ನಿಶ್ಚಿತ! ಕಾಂಗ್ರೆಸ್‌ ಸರ್ಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕು. ಖಾಲಿ ಬಕೆಟ್‌ ಅಲ್ಲಾಡಿಸುವುದನ್ನು ಇನ್ನಾದರೂ ಬಿಡಿ!” ಎಂದು ಬಿಜೆಪಿ ಟೀಕಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ...

ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ...

ಪ್ಯಾರಿಸ್ ಒಲಿಂಪಿಕ್ಸ್: 9 ಕ್ರೀಡಾಪಟುಗಳಿಗೆ ಅನುದಾನ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ...

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...