ಬಿಜೆಪಿ ಮುಖಂಡನ ಕೊಲೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು: ಮತ್ತೆ ಬಂಧನ ಭೀತಿ

Date:

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

- Advertisement -

2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರನ್ನು ಧಾರವಾಡದಲ್ಲಿ ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಹತ್ಯೆಯ ಹಿಂದೆ ಆಗ ಸಚಿವರಾಗಿದ್ದ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಪಟ್ಟಿ ಸಲ್ಲಿಸಿತ್ತು. 2020ರ ನೆವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ 9 ತಿಂಗಳು ಸೆರೆವಾಸ ಅನುಭವಿಸಿದ್ದ ಕುಲಕರ್ಣಿ ಅವರಿಗೆ 2021ರ ಆಗಸ್ಟ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಧಾರವಾಡ ಜಿಲ್ಲಾ ವ್ಯಾಪ್ತಿಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೀಗ, ವಿನಯ್ ಕುಲಕರ್ಣಿ ಅವರು ಜೈಲಿನಿಂದ ಹೊರಗಿದ್ದರೆ, ಸಾಕ್ಷಿಗಳ ಮೇಲೆ‌ ಪ್ರಭಾವ ಬೀರುವ, ಬೆದರಿಕೆ, ಒತ್ತಡ ಹಾಕುವ ಸಾಧ್ಯತೆಗಳಿವೆ. ಹೀಗಾಗಿ, ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಸಿಬಿಐ ಅರ್ಜಿಯನ್ನು ಪುರಸ್ಕರಿಸಿದೆ‌. ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿದೆ. ಹೀಗಾಗಿ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ವಿನಯ್ ಕುಲಕರ್ಣಿ ಅವರು ಧಾರವಾಡ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಧಾರವಾಡ ಜಿಲ್ಲೆಗೆ ಪ್ರವೇಅಸ ನಿರ್ಬಂಧಿಸಿದ್ದರ ಹೊರತಾಗಿಯೂ 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರ ಪರಿವಾಗಿ ಅವರ ಪತ್ನಿ ಪ್ರಚಾರ ನಡೆಸಿದ್ದರು. ಆ ವೇಳೆ, ಧಾರವಾಡ ಪ್ರವೇಶ ಕೋರಿ ಕುಲಕರ್ಣಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರವೇಶ ನೀಡಲು ಹೈಕೋರ್ಟ್ ನಿರಾಕರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...